ಬಸ್‌ನಿಲ್ದಾಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

7

ಬಸ್‌ನಿಲ್ದಾಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Published:
Updated:

ಹೈದರಾಬಾದ್ (ಪಿಟಿಐ): ಪೊಲೀಸ್‌ ಕಾನ್‌ಸ್ಟೆಬಲ್‌ ಸೇರಿದಂತೆ ನಾಲ್ವರು, 35 ವರ್ಷದ ಮಹಿಳೆ ಮೇಲೆ ಬಸ್‌ ನಿಲ್ದಾಣದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಆಂಧ್ರಪ್ರದೇಶದ  ಮೆಹಬೂಬ್‌ನಗರ ಜಿಲ್ಲೆಯ ಕೊತಕೊಟದಲ್ಲಿ ಗುರುವಾರ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಒಬ್ಬ ಪೊಲೀಸ್‌ ಕಾನ್‌ಸ್ಟೆಬಲ್‌, ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸ­ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬುಧವಾರ ಮಧ್ಯರಾತ್ರಿ 1ಗಂಟೆ ಸುಮಾರಿಗೆ ಮಹಿಳೆ ಬಸ್‌ಗಾಗಿ ಕಾಯುತ್ತಿದ್ದಾಗ ಈ  ಘಟನೆ ಸಂಭವಿಸಿದೆ ಎಂದು ಮೆಹಬೂಬ್‌ನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ. ನಾಗೇಂದ್ರಕುಮಾರ್‌ ಮಾಹಿತಿ ನೀಡಿದ್ದಾರೆ.ಪೊಲೀಸ್‌ ಕಾನ್‌ಸ್ಟೆಬಲ್ ಸೀನು, ಗೃಹರಕ್ಷಕ ದಳದ ಸಿಬ್ಬಂದಿ ನಾಗೇಂದ್ರ ಸೇರಿದಂತೆ ಖಾಸಗಿ ಸಂಸ್ಥೆಯ ಇಬ್ಬರು ನೌಕರರಾದ ರಮೇಶ್‌ ಹಾಗೂ ರಮೇಶ್‌ ಎಂಬುವರನ್ನು ಬಂಧಿಸಲಾಗಿದೆ. ಅತ್ಯಾಚಾರಕ್ಕೀಡಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry