ಸೋಮವಾರ, ಮೇ 23, 2022
21 °C

ಬಸ್ ಕಂದಕಕ್ಕೆ ಉರುಳಿ 27 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಮ್ಲಾ (ಐಎಎನ್‌ಎಸ್):   ಬಸ್ಸೊಂದು ಒಂದು ಸಾವಿರ ಅಡಿ ಆಳದ ಕಂದಕಕ್ಕೆ ಉರುಳಿದ್ದು, 27 ಮಂದಿ ಸಾವನ್ನಪ್ಪಿ 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಬಿಲ್ಸಾಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.ಸಾಮೂಹಿಕ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಪ್ರೇಮ್ ಕುಮಾರ್ ದುಮಾಲ್  ಗಾಯಗೊಂಡಿರುವ ಪ್ರಯಾಣಿಕರು ದಾಖಲಾದ  ಬಿಲ್ಸಾಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ  ಭೇಟಿ ನೀಡಿ ಗಾಯಾಳುಗಳನ್ನು ಚಿಕಿತ್ಸೆಯ ಬಗ್ಗೆ ವಿಚಾರಿಸಿದರು.ಹಿಮಾಚಲ ಪ್ರದೇಶದ ವಿವಿಧೆಡೆ ಕಳೆದ 3 ವರ್ಷಗಳಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸುಮಾರು ಮೂರೂವರೆ ಸಾವಿರ ಮಂದಿ ಸಾವನ್ನಪ್ಪಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.