ಸೋಮವಾರ, ನವೆಂಬರ್ 18, 2019
23 °C

ಬಸ್ ಡಿಕ್ಕಿ: ಬೈಕ್ ಸವಾರ ಸಾವು

Published:
Updated:

ಬೆಂಗಳೂರು: ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಗೋಪಾಲ್ (24) ಎಂಬುವರು ಸಾವನ್ನಪ್ಪಿರುವ ಘಟನೆ ಜಾಲಹಳ್ಳಿಯ ಕಮ್ಮಗೊಂಡನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.ಹಿಂಬದಿ ಸವಾರ ಭೀಮ ಎಂಬುವರು ಗಾಯಗೊಂಡಿದ್ದು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟಿ.ದಾಸರಹಳ್ಳಿಯ ನಿವಾಸಿ ಗೋಪಾಲ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಭುವನೇಶ್ವರಿನಗರದ ಭೀಮ ಕಟ್ಟಡ ನಿರ್ಮಾಣದ ಮೇಸ್ತ್ರಿಯಾಗಿದ್ದಾರೆ.

ಪ್ರತಿಕ್ರಿಯಿಸಿ (+)