ಬಸ್ ನಿಲ್ದಾಣದಲ್ಲಿ ವನ ಮಹೋತ್ಸವ

7

ಬಸ್ ನಿಲ್ದಾಣದಲ್ಲಿ ವನ ಮಹೋತ್ಸವ

Published:
Updated:
ಬಸ್ ನಿಲ್ದಾಣದಲ್ಲಿ ವನ ಮಹೋತ್ಸವ

ಕುಶಾಲನಗರ: ಅರಣ್ಯ ಇಲಾಖೆ, ಕಾವೇರಿ ಪರಿಸರ ಸಂರಕ್ಷಣಾ ಬಳಗದ ವತಿಯಿಂದ ಭಾನುವಾರ ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು. ಇದರ ಅಂಗವಾಗಿ ನಿಲ್ದಾಣದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಬಿ. ಭಾರತೀಶ್ ಮಾತನಾಡಿ, ಪರಿಸರ ಸಂರಕ್ಷಣಾ ಬಳಗ ಉತ್ತಮ ಕೆಲಸ ಮಾಡುತ್ತಿದೆ. ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.  ವಲಯ ಅರಣ್ಯಾಧಿಕಾರಿ ಎಂ.ಎಂ.ಅಚ್ಚಪ್ಪ ಮಾತನಾಡಿ, ಪ್ರತಿಯೊಬ್ಬರೂ ಪರಿಸರ ಕಾಳಜಿ ಹೊಂದುವ ಮೂಲಕ ನಿಸರ್ಗ ಸಂರಕ್ಷಣೆಗೆ ಮುಂದಾಗಬೇಕು. ಕುಶಾಲನಗರ ಅರಣ್ಯ ವಲಯ ವ್ಯಾಪ್ತಿಯಲ್ಲಿ 4 ಲಕ್ಷ ಸಸಿಗಳನ್ನು ಬೆಳೆಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಪರಿಸರ ಸಂರಕ್ಷಣಾ ಬಳಗದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಪೂಜಾರಿ, ಪೊಲೀಸ್ ವೃತ್ತ ನಿರೀಕ್ಷಕ ಬೋಸಯ್ಯ, ವಿವಿಧ ಸಂಘಟನೆಗಳ ಮುಖಂಡರಾದ ಎಚ್.ಪಿ.ಶಿವಕುಮಾರ್, ಎಚ್.ಎನ್. ರಾಮಚಂದ್ರ, ಎನ್.ಕೆ.ಮೋಹನ್‌ಕುಮಾರ್, ಎನ್.ಎನ್.ಚರಣ್, ಟಿ.ಆರ್.ಪ್ರಭುದೇವ್, ವನಿತಾ, ಎಂ.ಡಿ. ಕೃಷ್ಣಪ್ಪ, ಕೆ.ಜಿ. ಮನು ಇತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry