ಶನಿವಾರ, ಏಪ್ರಿಲ್ 17, 2021
27 °C

ಬಸ್ ಪಲ್ಟಿ: 25 ಜನ ಪ್ರಯಾಣಿಕರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಡಿ: ಬಸ್ಸಿನ ಸ್ಟೇರಿಂಗ್ ರಾಡ್ ಮುರಿದ ಪರಿಣಾಮ ಬಸ್ಸೊಂದು ಗಟಾರಗೆ ಉರುಳಿ ಬಿದ್ದು 25 ಜನರು ಗಾಯಗೊಂಡ ಘಟನೆ ಇಲ್ಲಿಯ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ಮುಂಜಾನೆ 11 ಗಂಟೆ ಸುಮಾರಿಗೆ ಸಂಭವಿಸಿದೆ.ಇಂಡಿ ಡಿಪೊಕ್ಕೆ ಸೇರಿದ ಈ ಬಸ್ ಸೊಲ್ಲಾಪುರದಿಂದ-ಸಿಂದಗಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಾಪುರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳೆ ಹೆಚ್ಚಾಗಿ ಪ್ರಯಾಣಿಸುತ್ತ್ದ್ದಿದರು ಎಂದು ತಿಳಿದು ಬಂದಿದೆ.ಈ ಕುರಿತು ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಬಸ್ ಅಪಘಾತದ ಸುದ್ದಿ ತಿಳಿದ ತಕ್ಷಣವೇ ಅಂಬುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದವು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.