ಬೆಂಗಳೂರು: ಇದೇ 27ರಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಕಾಲ ಮುಷ್ಕರ ನಡೆಸುವ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಮಿಕ ಸಂಘಟನೆಗಳಲ್ಲಿ ಒಡಕು ಉಂಟಾಗಿದೆ.

ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಎಸ್ಸಿ/ಎಸ್ಟಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ, ಸಿಐಟಿಯು ಸಹ ಮುಷ್ಕರಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದು ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸನ್ನ ಅವರು `ಪ್ರಜಾವಾಣಿ~ಗೆ ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಮುಷ್ಕರದಲ್ಲಿ ಭಾಗಿಯಾಗುವುದಾಗಿ ತಿಳಿಸಿದೆ.

ನೌಕರರ ಬೇಡಿಕೆಗಳ ಬಗ್ಗೆ ಅನೇಕ ಬಾರಿ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕಾರ್ಮಿಕರ ಹಕ್ಕುಗಳನ್ನು ದಮನಗೊಳಿಸುವ ಪ್ರಯತ್ನ ನಡೆದಿದೆ. ಇದನ್ನು ಖಂಡಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದು ಜಂಟಿ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.