ಭಾನುವಾರ, ಏಪ್ರಿಲ್ 18, 2021
29 °C

ಬಹಿರಂಗ ಹೇಳಿಕೆ ಬೇಡ: ಈಶ್ವರಪ್ಪ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: `ಯಡಿಯೂರಪ್ಪ ಹಾಗೂ ಸದಾನಂದ ಗೌಡ ನಮ್ಮ ನಾಯಕರು. ಇಬ್ಬರೂ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಕಾರ್ಯಕರ್ತರಿಗೆ ನೋವಾಗಿದೆ~ ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಸದಾನಂದಗೌಡ ಅವರು ಇನ್ನು ಮುಂದೆ ಬಹಿರಂಗವಾಗಿ ಹೇಳಿಕೆ ನೀಡದಂತೆ ತಾವು ಅವರಲ್ಲಿ ಪ್ರಾರ್ಥಿಸುತ್ತೇನೆ. ಸದ್ಯದಲ್ಲೇ ಇದು ಸರಿ ಹೋಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ, ಖಾತೆಗಳ ಮರುಹಂಚಿಕೆ, ನಿಗಮ-ಮಂಡಳಿಗಳಿಗೆ ನೇಮಕಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು. ಖಾತೆ ಮರುಹಂಚಿಕೆ ದೊಡ್ಡ ಪ್ರಮಾಣದಲ್ಲಿ ನಡೆಯುವುದಿಲ್ಲ ಎಂದು ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.