ಬಹುಮಹಡಿ ಕಟ್ಟಡದ ಸುರಕ್ಷತೆ ಪರಿಶೀಲನೆಗೆ ವಿಶೇಷ ತಂಡ ರಚನೆ

ಶುಕ್ರವಾರ, ಜೂಲೈ 19, 2019
22 °C

ಬಹುಮಹಡಿ ಕಟ್ಟಡದ ಸುರಕ್ಷತೆ ಪರಿಶೀಲನೆಗೆ ವಿಶೇಷ ತಂಡ ರಚನೆ

Published:
Updated:

ಬೆಂಗಳೂರು: ನಗರದ ಬಹುಮಹಡಿ ಕಟ್ಟಡಗಳಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವುದಕ್ಕೆ  ಹೈಕೋರ್ಟ್‌ನ ಕೆಂಗಣ್ಣಿಗೆ ಗುರಿಯಾಗಿದ್ದ ಬಿಬಿಎಂಪಿ ಇದೀಗ ಕಟ್ಟಡಗಳ ಪರಿಶೀಲನಾ ಕಾರ್ಯ ಕೈಗೊಳ್ಳಲು ವಿಶೇಷ ತಂಡ ರಚಿಸಲು ನಿರ್ಧರಿಸಿದೆ.ಬಿಬಿಎಂಪಿ ಆಯುಕ್ತರು, ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ನಗರ ಯೋಜನೆ ಹಾಗೂ ವಲಯಗಳ ಮುಖ್ಯ ಎಂಜಿನಿಯರ್‌ಗಳೊಂದಿಗೆ ಬುಧವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.

 `ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಬಹುಮಹಡಿ ಕಟ್ಟಡಗಳಲ್ಲಿನ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಸಮಗ್ರವಾಗಿ ಪರಿಶೀಲಿಸಲು ಕ್ರಿಯಾ ಯೋಜನೆ ರೂಪಿಸಲಾಗುತ್ತದೆ. ಅದರಂತೆ ಅಗ್ನಿಶಾಮಕ ದಳದ ಅಧಿಕಾರಿಗಳು, ನಗರ ಯೋಜನೆ ವಿಭಾಗದ ಎಂಜಿನಿಯರ್‌ಗಳು ಹಾಗೂ ವಲಯಗಳ ಮುಖ್ಯ ಎಂಜಿನಿಯರ್‌ಗಳನ್ನು ಒಳ ಗೊಂಡ 6 ವಿಶೇಷ ತಂಡಗಳನ್ನು ರಚಿಸ ಲಾಗುವುದು~ ಎಂದು ಆಯುಕ್ತ ಸಿದ್ದಯ್ಯ ತಿಳಿಸಿದರು.`ಈ ತಂಡಗಳು ಮೂರು ದಿನಗಳಲ್ಲಿ 100 ಬಹುಮಹಡಿ ಕಟ್ಟಡಗಳಲ್ಲಿ ತಪಾಸಣೆ ನಡೆಸಿ ಆ ಕಟ್ಟಡಗಳಲ್ಲಿ ಅಳವಡಿಸಲಾಗಿರುವ ಸುರಕ್ಷತಾ ಕ್ರಮಗಳ ಬಗ್ಗೆ ವರದಿ ನೀಡಲಿವೆ. ಆನಂತರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು~ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry