ಸೋಮವಾರ, ಮೇ 10, 2021
22 °C

ಬಹುಮಹಡಿ ಕಟ್ಟಡ ಕುಸಿತ : 10 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಥಾಣೆ (ಪಿಟಿಐ) : ಇಲ್ಲಿನ ಬಜಾರ್ ಪೇಟೆಯಲ್ಲಿರುವ ಸುಮಾರು 35 ವರ್ಷಕ್ಕೂ ಹಳೆಯದಾದ `ಶಕುಕಂತಲಾ” ಹೆಸರಿನ ಬಹುಮಹಡಿ  ಕಟ್ಟಡವೊಂದು ಶುಕ್ರವಾರ ನಸುಕಿನ ವೇಳೆಯಲ್ಲಿ ಕುಸಿದ ಪರಿಣಾಮ ಮೂರು ವರ್ಷದ ಹಸುಳೆ ಮತ್ತು ಏಳು ವರ್ಷದ ಬಾಲಕ ಸೇರಿದಂತೆ ಕನಿಷ್ಠ 10 ಮಂದಿ ಸತ್ತಿದ್ದು, 14 ಮಂದಿ ಗಾಯಗೊಂಡಿದ್ದಾರೆ.

ಬೆಳಗಿನ ಜಾವ ಕಟ್ಟಡದ ನಿವಾಸಿಗಳು ಗಾಢ ನಿದ್ರೆಯಲ್ಲಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಂದ ಪೊಲೀಸರು ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆ ನಡೆಸಿ 22 ಮಂದಿಯನ್ನು ರಕ್ಷಿಸಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.

ತೀವ್ರ ಗಾಯಗೊಂಡವರನ್ನು ನಗರದ ಕಾಲಸೇಕರ್, ಸಿಎಸ್‌ಎಂಎಚ್ ಹಾಗೂ ಸಿವಿಲ್ ಆಸ್ಪತ್ರೆಗಳಿಗೆ ದಾಖಲಿಸಿರುವುದಾಗಿ ಇದೇ ವೇಳೆ ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.