ಬಾಂಗ್ಲಾ ಚುನಾವಣೆ: 12 ಸಾವು

7

ಬಾಂಗ್ಲಾ ಚುನಾವಣೆ: 12 ಸಾವು

Published:
Updated:

ಢಾಕಾ (ಪಿಟಿಐ): ವಿರೋಧ ಪಕ್ಷಗಳ ವಿರೋಧದ ನಡುವೆ  ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಭಾನುವಾರ ಆರಂಭವಾಗಿದ್ದು ಈ ವೇಳೆ ನಡೆದ ಹಿಂಸಾಚಾರದಲ್ಲಿ 12 ಜನರು ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ 8 ಗಂಟೆಗೆ 300 ಕ್ಷೇತ್ರಗಳ ಪೈಕಿ 147 ಕ್ಷೇತ್ರಗಳಲ್ಲಿ ಮತದಾನ ಆರಂಭವಾಯಿತು. ಚುನಾವಣೆ ವಿರೋಧಿಸಿ ವಿರೋಧ ಪಕ್ಷಗಳು ಮತ್ತು ಆಡಳಿತರೂಢ ಪಕ್ಷದ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ 12 ಜನರು ಮೃತಪಟ್ಟಿದ್ದಾರೆ. 100 ಕ್ಕೂ ಹೆಚ್ಚು  ಮಂದಿ ಗಾಯಗೊಂಡಿದ್ದಾರೆ ಎಂದು ಬಾಂಗ್ಲಾ ಪೊಲೀಸರು ತಿಳಿಸಿದ್ದಾರೆ.ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಷನಲ್‌ ಪಾರ್ಟಿ ಸೇರಿದಂತೆ ಇತರೆ 18 ರಾಜಕೀಯ ಪಕ್ಷಗಳು ಈ ಚುನಾವಣೆಯನ್ನು ಬಹಿಷ್ಕರಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry