ಶುಕ್ರವಾರ, ಸೆಪ್ಟೆಂಬರ್ 20, 2019
28 °C

ಬಾಂಬ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ

Published:
Updated:

ನವದೆಹಲಿ (ಪಿಟಿಐ): ದೆಹಲಿ ಹೈಕೋರ್ಟ್‌ನಲ್ಲಿ ಸೆ.7ರಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೃದುಲ್ ಬಕ್ಷಿ ಎಂಬಾತ ಗುರುವಾರ ಇಲ್ಲಿನ ರಾಮ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಘಟನೆಯಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿದೆ. ಬಕ್ಷಿಯ ತಲೆ, ಹೃದಯ ಹಾಗೂ ಕೈಕಾಲುಗಳು ತೀವ್ರವಾಗಿ ಗಾಯಗೊಂಡಿದ್ದವು ಎಂದು ವೈದ್ಯರು ತಿಳಿಸಿದ್ದಾರೆ. ಬಕ್ಷಿ ದಕ್ಷಿಣ ದೆಹಲಿಯ ಒಕಾಲಾದ ನಿವಾಸಿಯಾಗಿದ್ದು, ಈತನಿಗೆ ಪತ್ನಿ ಹಾಗೂ ಆರು ತಿಂಗಳ ಗಂಡು ಮಗು ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Post Comments (+)