ಬಾಕಿ ವೇತನಕ್ಕಾಗಿ ಪೌರ ಕಾರ್ಮಿಕರ ಪ್ರತಿಭಟನೆ

7

ಬಾಕಿ ವೇತನಕ್ಕಾಗಿ ಪೌರ ಕಾರ್ಮಿಕರ ಪ್ರತಿಭಟನೆ

Published:
Updated:

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಎರಡು ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ಪೌರ ಕಾರ್ಮಿಕರ ವೇತನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನಗರದ ಪೌರ ಕಾರ್ಮಿಕರು ಗುರುವಾರ ಪಾಲಿಕೆಯ ಕೇಂದ್ರ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಅಧ್ಯಕ್ಷ ನಾರಾಯಣ, `ಬಿಬಿಎಂಪಿಯಲ್ಲಿರುವ 18 ಸಾವಿರ ಪೌರ ಕಾರ್ಮಿಕರಿಗೆ ಎರಡು ತಿಂಗಳಿಂದ ವೇತನ ಪಾವತಿಯಾಗಿಲ್ಲ~ ಎಂದು ದೂರಿದರು.  ಪ್ರತಿಭಟನಾ ಸ್ಥಳಕ್ಕೆ ಬಂದ ಬಿಬಿಎಂಪಿ ಆಯುಕ್ತ ರಜನೀಶ್ ಗೋಯಲ್, `ಇನ್ನು ಮುಂದೆ ಪ್ರತಿ ತಿಂಗಳು ಸರಿಯಾಗಿ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ಇಎಸ್‌ಐ ಹಾಗೂ ಪಿಎಫ್‌ಗೆ ಕಾನೂನಿನ ಪ್ರಕಾರವೇ ಹಣ ಕಡಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ~ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry