ಶನಿವಾರ, ಮೇ 15, 2021
26 °C

ಬಾಕ್ಸಿಂಗ್: ಸೆಮಿಫೈನಲ್‌ಗೆ ಸುರೇಂದರ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಉತ್ತಮ ಪ್ರದರ್ಶನ ಮುಂದುವರಿಸಿರುವ ಭಾರತದ ಸುರೇಂದರ್ ಸಿಂಗ್ ಕಾಮನ್‌ವೆ  ಲ್ತ್ ಯೂತ್ ಕ್ರೀಡಾಕೂಟದ ಬಾಕ್ಸಿಂಗ್ ಸ್ಪರ್ಧೆಯ 75 ಕೆ.ಜಿ. ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.ಈ ಮೂಲಕ ಭಾರತಕ್ಕೆ ಪದಕವನ್ನು ಖಚಿತಪಡಿಸಿದ್ದಾರೆ. 17 ವರ್ಷದ ಸುರೀಂದರ್ ಶನಿವಾರ ನಡೆದ ಸ್ಪರ್ಧೆಯಲ್ಲಿ 21:15 ಪಾಯಿಂಟ್‌ಗಳಲ್ಲಿ ನಾಥನ್ ತಾರ್ಲೆ ಅವರನ್ನು ಮಣಿಸಿದರು.ಸೆಮಿಫೈನಲ್‌ನಲ್ಲಿ ಸ್ಕಾಟ್ಲೆಂಡ್‌ನ ಗ್ರಾಂಟ್ ಕೈಗ್ಲೇಯಿ ಅವರ ಸವಾಲನ್ನು ಎದುರಿಸಲಿದ್ದಾರೆ.

ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಭಾರತದ ರಾಹುಲ್ ಪೂನಿಯಾ ಸಹ ಪದಕವನ್ನು ಖಚಿತ ಪಡಿಸಿಕೊಂಡಿದ್ದಾರೆ. ಸುರೀಂದರ್ ಯೂತ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಜಯಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.