ಬಾಗೆ ಗ್ರಾಮ: ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ

7

ಬಾಗೆ ಗ್ರಾಮ: ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ

Published:
Updated:

ಸಕಲೇಶಪುರ: ತಾಲ್ಲೂಕಿನ ಬಾಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಹಾಗೂ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.ಶಾಸಕ ಎಚ್.ಕೆ.ಕುಮಾರಸ್ವಾಮಿ ರಾಜೀವ್‌ಗಾಂಧಿ ಸೇವಾ ಕೇಂದ್ರ ಹಾಗೂ ಬಾಗೆ ಗ್ರಾಮದಲ್ಲಿ ಸ್ಮಶಾನ ಕಟ್ಟಡಗಳನ್ನು ಉದ್ಘಾಟಿಸಿದರು.  ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಆರ್. ಸತ್ಯನಾರಾಯಣ  ಕೆಂದನಮನೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ರಂಗಮಂದಿರ ಕಾಮಗಾರಿಗೆ ಚಾಲನೆ ನೀಡಿದರು.ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಸುಲೋಚನಾ ರಾಮಕೃಷ್ಣ ಕಾಕನಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಿ, ವಿವಿಧ  ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಶಾಸಕ ಬಿ.ಬಿ.ಶಿವಪ್ಪ, ಉಪವಿಭಾಗಾಧಿಕಾರಿ ವಿದ್ಯಾಶ್ರೀ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವೇದಾವತಿ, ಮಾಜಿ ಅಧ್ಯಕ್ಷ ಹೆಗ್ಗೋವೆ ಗೋಪಾಲಸ್ವಾಮಿ, ಬಾಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಮೀಲಾ, ಉಪಾಧ್ಯಕ್ಷ ಎಸ್.ಮನು, ಹಲಸುಲಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುರೇಶ್ ಆಳ್ವ, ಬಾಳ್ಳು ಶಿವಕುಮಾರ್, ಸ.ಬ.ಭಾಸ್ಕರ್, ಕಾಫಿ ಬೆಳೆಗಾರ ಬಿ.ಎ.ಜಗನ್ನಾಥ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry