ಶುಕ್ರವಾರ, ನವೆಂಬರ್ 15, 2019
21 °C

ಬಾಬಾ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Published:
Updated:

ಪಡುಬಿದ್ರಿ: ಬಾಬಾರಾಮ್ ದೇವ್‌ರವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ  ಇಲ್ಲಿನ ಬಸ್ ನಿಲ್ದಾಣದ ಬಳಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಬಿಜೆಪಿ ಸ್ಥಾನೀಯ ಸಮಿತಿ ನೇತೃತ್ವದಲ್ಲಿ ಒಂದು ದಿನದ ಪ್ರತಿಭಟನೆ ನಡೆಯಿತು.ಉಡುಪಿ ಜಿ.ಪಂ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಮಾತನಾಡಿ, ‘60ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ನ ಹಲವು ನಾಯಕರು ಕಪ್ಪು ಹಣವನ್ನು ವಿದೇಶಿ ಬ್ಯಾಂಕ್‌ಗಳಲ್ಲಿ ಇಟ್ಟಿದ್ದಾರೆ. ಇದು ಬಯಲಾಗದಿರಲಿ ಎಂದು ಹೋರಾಟ ಹತ್ತಿಕ್ಕಲು ಯತ್ನಿಸಿರುವುದು ವಿಷಾದನೀಯ’ ಎಂದರು.

ಕೇಂದ್ರ ಸರಕಾರವು ಜನರನ್ನು ತಪ್ಪು ಸಂದೇಶವನ್ನು ನೀಡುತ್ತಿದೆ ಎಂದು ಆರೋಪಿಸಿದರು.ಜಿ.ಪಂ ಸದಸ್ಯೆ ಗೀತಾಂಜಲಿ ಸುವರ್ಣ, ಯುವಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ವಿಲಾಸ್ ನಾಯಕ್, ವಿ.ಎಚ್.ಪಿ ವಲಯಾಧ್ಯಕ್ಷ ಡಾ.ಎನ್.ಟಿ.ಅಂಚನ್, ಬಜರಂಗದಳದ ಸಂಚಾಲಕ ಪ್ರಕಾಶ್ ಶೆಟ್ಟಿ, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಗುರುರಾಜ್. ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಿತ್ರಾ ಆಚಾರ್ಯ, ಪಡುಬಿದ್ರಿಗ್ರಾ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಆಚಾರ್ಯ, ಉಪಾಧ್ಯಕ್ಷೆ ಸೇವಂತಿ ಸದಾಶಿವ್,  ಜಿಪಂ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಪಂ ಮಾಜಿ ಸದಸ್ಯೆ ನೀತಾ ಗುರುರಾಜ್, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ದೀಪಕ್ ಕಾಮತ್ ಬೆಳ್ಮಣ್, ಕ್ಷೇತ್ರ ಯುವಮೋರ್ಚಾ ಕಾರ್ಯದರ್ಶಿ ಸಂತೋಷ್ ಕುಮಾರ್ ಇದ್ದರು.

ಪ್ರತಿಕ್ರಿಯಿಸಿ (+)