ಸೋಮವಾರ, ಮೇ 17, 2021
23 °C

ಬಾಬು ಜಗಜೀವನ್ ರಾಮ್ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ತಾಲ್ಲೂಕು ಕಚೇರಿಯಲ್ಲಿ ಡಾ.ಬಾಬುಜಗಜೀವನ್‌ರಾಮ್ ಅವರ 105ನೇ ಜನ್ಮದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಚಂದ್ರ, ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ಬಾಬು ಜಗಜೀವನ್‌ರಾಮ್ ಅವರು ದೇಶದ ಉಪಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಹಲವಾರು ಕಾರ್ಯಕ್ರಮಗಳು ಇಂದಿಗೂ ಜನಪರವಾಗಿವೆ. ಇಂತಹ ನಾಯಕರ ಜನ್ಮದಿನಾಚರಣೆ ನಡೆಸುವುದು ಸಾರ್ಥಕ ಎಂದು ಹೇಳಿದರು.ಜನ್ಮದಿನಾಚರಣೆ ಸಂದರ್ಭದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವರಾಜ್ ಹಾಗೂ ವಿವಿಧ ದಲಿತಪರ  ಹಾಗೂ ಕನ್ನಡ ಪರಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.     ಬಾಬುಜೀ ಯೋಜನೆ ಗುಣಗಾನ

ದೇವನಹಳ್ಳಿ: ದೇಶದಲ್ಲಿ ಆಹಾರದ ಕೊರತೆ ಉಂಟಾದ ಸಮಯದಲ್ಲಿ ಕೃಷಿ ಸಚಿವರಾಗಿದ್ದ ಬಾಬು ಜಗಜೀವನ್ ರಾಮ್ ಅವರು ಜಾರಿಗೆ ತಂದ ಯೋಜನೆಗಳು ಹಸಿರು ಕ್ರಾಂತಿಗೆ ಕಾರಣವಾದವು ಎಂದು ಜಿ.ಪಂ.ಮಾಜಿ ಸದಸ್ಯ ಪಿಳ್ಳಮುನಿಶ್ಯಾಮಪ್ಪ ಅಭಿಪ್ರಾಯಪಟ್ಟರು. ಇಲ್ಲಿನ ಮಾದಿಗ ದಂಡೋರ ಸಮಿತಿ ಕಚೇರಿಯಲ್ಲಿ ತಾಲ್ಲೂಕು ಮಾದಿಗ ದಂಡೋರ ಸಮಿತಿಯು ಗುರುವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಮ್ ಅವರ 105ನೇ ಜನ್ಮದಿನಾಚರಣೆಯಲ್ಲಿ  ಮಾತನಾಡಿದರು.ಬಸವಣ್ಣ, ಬುದ್ಧರ ಅನುಯಾಯಿಯಾಗಿದ್ದ ಬಾಬುಜೀ ಸತತ 45ವರ್ಷಗಳ ರಾಜಕೀಯದಲ್ಲಿ ಹಲವು ಇಲಾಖೆಗಳ ಮಂತ್ರಿಯಾಗಿ, ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅವರು ದೇಶದ ಬೇಸಾಯದಲ್ಲಿ ವೈಜ್ಞಾನಿಕ ಬಸಲಾವಣೆಗೆ ಆದ್ಯತೆ ನೀಡಿದ್ದರು ಎಂದು ಅವರು ಹೇಳಿದರು. ತಾಲ್ಲೂಕು ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಜಿ.ಮಾರಪ್ಪ, ಪ್ರಧಾನ ಕಾರ್ಯದರ್ಶಿ ನಾಗರಾಜು, ಉಪಾಧ್ಯಕ್ಷ ಗೋಪಾಲಸ್ವಾಮಿ, ಕೃಷ್ಣ, ಮುನಿಯಪ್ಪ, ಖಜಾಂಚಿ ಪೂಜಪ್ಪ, ಜಿಲ್ಲಾ ಸಮಿತಿ ಸದಸ್ಯ ನರಸಿಂಹಮೂರ್ತಿ, ಜಂಟಿ ಕಾರ್ಯದರ್ಶಿ ಮುದಗುರ್ಕಿ ಮಾರಪ್ಪ, ತಾ.ಪಂ. ಸದಸ್ಯ ನರಸಿಂಹ ಮೂರ್ತಿ ಹಾಗೂ ಪದಾಧಿಕಾರಿಗಳು, ಮುಖಂಡರು ಇದ್ದರು. ಡಾ.ಬಾಬು ಜಗಜೀವನ್ ರಾಮ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ರೋಗಿಗಳಿಗೆ ಹಾಲು, ಬ್ರೆಡ್ ಮತ್ತು ಹಣ್ಣು ವಿತರಿಸಲಾಯಿತು.ತಾ.ಪಂ. ಕಚೇರಿಯಲ್ಲಿ ಸ್ಮರಣೆ

ದೇವನಹಳ್ಳಿ: ಪ್ರಾಮಾಣಿಕ ಹಾಗೂ ಸರಳ ವ್ಯಕ್ತಿತ್ವದ ರಾಜಕಾರಣಿ ಡಾ.ಬಾಬು ಜಗಜೀವನ ರಾಮ್ ಎಂದು ತಾ.ಪಂ. ಅಧ್ಯಕ್ಷ ಬಿ.ಕೆ.ಶಿವಣ್ಣ ಬಣ್ಣಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಡಾ.ಬಾಬು ಜಗಜೀವನ ರಾಮ್ ಅವರ 105ನೇ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.ಬಾಬುಜೀ ರಕ್ಷಣಾ ಸಚಿವರಾದ ಅವಧಿಯಲ್ಲಿ ಮೊಟ್ಟ ಮೊದಲಿಗೆ ನಿವೃತ್ತ ಸೈನಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತಂದರು. ಅಂತಹ ಆದರ್ಶ ವ್ಯಕ್ತಿಯ ಹೆಸರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅರ್ಹರಿಗೆ ಪ್ರಶಸ್ತಿ ನೀಡುತ್ತರುವುದು ಶ್ಲಾಘನೀಯ ಎಂದರು. ತಾ.ಪಂ. ಸದಸ್ಯೆ ವೆಂಕಟೇಶಮ್ಮ , ರಾಧಿಕಾ ತ್ಯಾಗರಾಜ್, ಮೀನಾಕ್ಷಿ, ಟಿಎಪಿಎಂಸಿಎಸ್ ಅಧ್ಯಕ್ಷ ಇರಿಗೇನಹಳ್ಳಿ ಬಿ.ಶ್ರಿನಿವಾಸ್, ಹಾರೋಹಳ್ಳಿ ಗ್ರಾ.ಪಂ. ಅಧ್ಯಕ್ಷ ಚಂದ್ರಪ್ಪ, ತಾ.ಪಂ. ವ್ಯವಸ್ಥಾಪಕ ಗೋವಿಂದಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.