ಕೊಳ್ಳೇಗಾಲ: ಡಾ. ಬಾಬು ಜಗಜೀವನರಾಂ ಸಮುದಾಯ ಭವನದ ಕಾಂಪೌಂಡ್, ಅಡುಗೆ ಮನೆ ಸೇರಿದಂತೆ ವಿವಿಧ ಕಾಮಗಾರಿಗೆ ರೂ. 50 ಲಕ್ಷ ಹಣವನ್ನು ಸಮಾಜ ಕಲ್ಯಾಣ ಇಲಾಖೆ ಸಚಿವರು ಬಿಡುಗಡೆ ಮಾಡಿದ್ದಾರೆ ಎಂದು ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು.

ಬಾಪುನಗರದ ಡಾ.ಬಾಬು ಜಗಜೀವನರಾಂ ಸಮುದಾಯ ಭವನದ ಕಾಂಪೌಂಡ್, ಅಡಿಗೆ ಮನೆ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನಾ ನೆರವೇರಿಸಿ ಮಾತನಾಡಿದರು.

ಸಚಿವರು ಎ. ನಾರಾಯಣಸ್ವಾಮಿ ಮಾತನಾಡಿ, ಸಮುದಾಯ ಭವನ ಎಲ್ಲೆಡೆ ನಿರ್ಮಾಣಗೊಳ್ಳುತ್ತಿದೆ. ಸಮುದಾಯ ಭವನ ನಿರ್ಮಾಣಮಾಡುವಲ್ಲಿ ತೋರುವ ಆಸಕ್ತಿಯನ್ನು ಜನರು ಅದರ ಬಳಕೆಯಲ್ಲೂ ತೋರಿಸಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ರೇಣುಕಾಚಾರ್ಯ, ಜಯಶೇಖರ್, ಬಾಲರಾಜ್, ಮಹದೇವ, ಶೇಖರ್, ಯಜಮಾನ ಸಿದ್ದಪ್ಪ, ಮಹದೇವು ಸಿದ್ದರಾಜು ಇತರರು ಇದ್ದರು.

ಹೊದಿಕೆ ನೀಡಲು ಸೂಚನೆ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ದಿಂಬು ಮತ್ತು ಹೊದಿಕೆಯನ್ನು ತಕ್ಷಣವೇ ನೀಡಿವ ಬಗ್ಗೆ ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎ. ನಾರಾಯಣಸ್ವಾಮಿ ಸೂಚನೆ ನೀಡಿದರು.

ತಾಲ್ಲೂಕಿನ ಹನೂರು ಪಟ್ಟಣದ ಮೊರಾರ್ಜಿ ದೇಸಾಯಿ ಬಾಲಕ ಮತ್ತು ಬಾಲಕಿಯರ ವಸತಿ ಶಾಲೆಗೆ ಭಾನುವಾರ ಸಂಜೆ ಭೇಟಿ ನೀಡಿದ ಅವರು, ನಿಲಯದ ವಿದ್ಯಾರ್ಥಿಗಳ ಜತೆ ಆಹಾರ ಸೇವಿಸಿದರು.
ವಿದ್ಯುತ್ ಕಡಿತಗೊಂಡರೆ ಓದಿಗೆ ತೊಂದರೆಯಾಗುತ್ತಿದೆ. ಜನರೇಟರ್ ವ್ಯವಸ್ಥೆ ಕಲ್ಪಿಸಲು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

ಶಾಸಕ ಜಿ.ಎನ್. ನಂಜುಂಡಸ್ವಾಮಿ, ಆರ್. ನರೇಂದ್ರ, ಮಾಜಿ ಶಾಸಕಿ ಪರಿಮಳ ನಾಗಪ್ಪ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರತಿಭಾ, ಮಹದೇವಯ್ಯ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.