ಬಾರದ ಅಂಕಪಟ್ಟಿ: ಪದವಿ ವಂಚಿತ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542

ಬಾರದ ಅಂಕಪಟ್ಟಿ: ಪದವಿ ವಂಚಿತ

Published:
Updated:

ಮುಳಬಾಗಲು: ಪರೀಕ್ಷೆ ಬರೆದು ಎರಡು ವರ್ಷವಾದರೂ ಅಂಕಪಟ್ಟಿ ಬಾರದ ಕಾರಣ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ 2009ರಲ್ಲಿ ನಡೆಸಿದ ಬಿ.ಕಾಂ. 3ನೇ ಸೆಮಿಸ್ಟರ್ ಪರೀಕ್ಷೆಯ ಅಂಕಪಟ್ಟಿ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಇದುವರೆಗೂ ಬಂದಿಲ್ಲ. ಪದವಿ ಮುಗಿದರೂ ಅಂಕಪಟ್ಟಿ ಇಲ್ಲದೇ ವಿದ್ಯಾರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಲಾಗದೆ ಪರಿತಪಿಸುತ್ತಿದ್ದಾರೆ.ಕಂಪ್ಯೂಟರ್ ಫಂಡಮೆಂಟಲ್ ವಿಷಯದ ಆಂತರಿಕ ಅಂಕಗಳನ್ನು ಕಾಲೇಜಿನಿಂದ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದರೂ ಅಲ್ಲಿನ ಸಿಬ್ಬಂದಿ ಕಂಪ್ಯೂಟರ್‌ನಲ್ಲಿ ಅಂಕ ದಾಖಲಿಸದಿರುವುದು ಅಂಕಪಟ್ಟಿ ವಿಳಂಬಕ್ಕೆ ಕಾರಣ ಎನ್ನಲಾಗಿದೆ. ಎರಡು ಸಲ ಆಂತರಿಕ ಅಂಕಗಳ ಪಟ್ಟಿಯನ್ನು ವಿ.ವಿ.ಗೆ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈ ಸಂಬಂಧ ಕುಲ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ.ಚಿಕ್ಕಬಳ್ಳಾಪುರದಲ್ಲಿ ಈಚೆಗೆ ನಡೆದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರೂ, ಮೂರನೇ ಸೆಮಿಸ್ಟರ್ ಅಂಕಪಟ್ಟಿ ಇಲ್ಲವೆಂದು ಯಾರಿಗೂ ಉದ್ಯೋಗ  ನೀಡಿಲ್ಲ. ಉದ್ಯೋಗ, ಉನ್ನತ ಶಿಕ್ಷಣ ಎರಡರಿಂದಲೂ ಈ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry