ಭಾನುವಾರ, ಏಪ್ರಿಲ್ 11, 2021
32 °C

ಬಾರದ ಮುಖ್ಯ ಗುರು: ಕಾಯ್ದ ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿರುಗುಪ್ಪ: ವಿದ್ಯಾರ್ಥಿಗಳು ಪರೀಕ್ಷೆಗೆ ಸರಿಯಾದ ಸಮಯಕ್ಕೆ ಹಾಜರು. ಆದರೆ ಪ್ರಶ್ನೆಪತ್ರಿಕೆ ನೀಡುವ ಮುಖ್ಯೋಪಾಧ್ಯಾಯರು ಮಧ್ಯಾಹ್ನ ಆದರೂ ನಾಪತ್ತೆಯಾದರೆ ಪರೀಕ್ಷೆ ಬರೆಯುವ  ಬಡ ವಿದ್ಯಾರ್ಥಿಗಳ ಪಾಡೇನು? ಇಂತಹ ಒಂದು ಪ್ರಸಂಗ ತಾಲ್ಲೂಕಿನ ಗಡಿಭಾಗದ ಹಚ್ಚೊಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದಿದೆ.ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ನೀಡಿ ಪರೀಕ್ಷೆ ನಡೆಸ ಬೇಕಾದ ಮುಖ್ಯೊಪಾಧ್ಯಾಯರೇ ಶಾಲೆಗೆ  ತಡವಾಗಿ 11.30ಕ್ಕೆ ಆಗಮಿಸಿದಾಗ ಅಲ್ಲಿಯವರೆಗೆ  8 ಮತ್ತು 9ನೇ ತರಗತಿಯ ವಿದ್ಯಾರ್ಥಿ ಗಳು ಪ್ರಶ್ನೆಪತ್ರಿಕೆ ಇಲ್ಲದೆ ಪರೀಕ್ಷೆ ಬರೆಯಲು ಕಾಯುತ್ತ ಕುಳಿತುಕೊಳ್ಳ ಬೇಕಾದ ಪರಿಸ್ಥಿತಿ ಉಂಟಾಗಿದೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಮುಖ್ಯೋಪಾಧ್ಯಾಯರು ಪರೀಕ್ಷೆ ಯಂದು ನಿಗದಿತ ಸಮಯಕ್ಕೆ ಶಾಲೆಗೆ ಹಾಜರಾಗದೆ ಪ್ರಶ್ನೆಪತ್ರಿಕೆಯನ್ನು ಸಹ ಸಿದ್ಧಪಡಿಸದೆ ಇರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಗ್ರಾಮಸ್ಥರು ದೂರಿದರು.ಶಾಲೆ ಮುಖ್ಯೋಪಾಧ್ಯಾಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ತಮ್ಮ ಸಹಶಿಕ್ಷಕರೊಂದಿಗೆ ಕೂಡಿ ಕೊಂಡು ಸೇವೆ ಸಲ್ಲಿಸುವ ಮನೋಭಾವನೆ ಇಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. 10 ಗಂಟೆಗೆ ಆರಂಭ ಆಗಬೇಕಾಗಿದ್ದ ಪರೀಕ್ಷೆಗೆ 12 ಗಂಟೆಯಾದರೂ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಕುಳಿತು ಸಮಯ ಕಳೆದರು.

ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎ.ತಿಮ್ಮಣ್ಣ, ಶಿಕ್ಷಣ ಸಂಯೋಜಕ ಶಿವಲಿಂಗಾರೆಡ್ಡಿ ಮುಖ್ಯೋಪಾಧ್ಯಾಯರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಮತ್ತೊಬ್ಬ ಹಿರಿಯ ಶಿಕ್ಷಕರೊಬ್ಬರಿಗೆ ಅಧಿಕಾರ ನೀಡಿದರು. ನಂತರ ಗ್ರಾಮಸ್ಥರ ಮನವೊಲಿಸಿ ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.