ಬಾರ್ ಪರಿಚಾರಕಿ ಅವಕಾಶ ಸಲ್ಲ

ಭಾನುವಾರ, ಜೂಲೈ 21, 2019
21 °C

ಬಾರ್ ಪರಿಚಾರಕಿ ಅವಕಾಶ ಸಲ್ಲ

Published:
Updated:

ಮೂಡಿಗೆರೆ: ಬೆಂಗಳೂರಿನ ಬಾರ್, ಕ್ಲಬ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಹಿಳಾ ಪರಿಚಾರಕಿಯರನ್ನು ನೇಮಿಸಲು ಮುಂದಾಗಿರುವ ಅಬಕಾರಿ ಸಚಿವ ರೇಣುಕಾಚಾರ್ಯ ಅವರ ಕ್ರಮ ಖಂಡನೀಯ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ನೂತನ ಪ್ರಧಾನ ಕಾರ್ಯದರ್ಶಿ ಟಿ.ಕಮಲಾಕ್ಷಿ ಕೃಷ್ಣಪ್ಪ ಹೇಳಿದ್ದಾರೆ.

ಈ ಬಗ್ಗೆ  ಇತ್ತೀಚೆಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಹಿಳೆಯರ, ಯುವಕರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿದೆ. ರಾಜ್ಯದಲ್ಲಿ ಬೇಕಾಬಿಟ್ಟಿ ಮದ್ಯ ಮಾರಾಟ ಮಾಡಲು ಪರವಾನಗಿ ನೀಡಲಾಗುತ್ತಿದೆ ಎಂದು ದೂರಿದರು.

ಮಹಿಳಾ ಪರಿಚಾರಕಿಯನ್ನು  ಬಾರ್,ಕ್ಲಬ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ನೇಮಿಸಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry