ಬಾರ್ ಯುವತಿಯರ ಶೋಷಣೆ: ಎಚ್ಚರಿಕೆ

7

ಬಾರ್ ಯುವತಿಯರ ಶೋಷಣೆ: ಎಚ್ಚರಿಕೆ

Published:
Updated:

ಬೆಂಗಳೂರು: `ಬಾರ್‌ಗಳಲ್ಲಿ ಕೆಲಸ ಮಾಡುವ ಯುವತಿಯರನ್ನು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿ ಶೋಷಣೆ ಮಾಡುವ ಬಾರ್‌ಗಳ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ಠಾಣೆಗಳ ಸಿಬ್ಬಂದಿಗೆ ಆದೇಶಿಸಲಾಗಿದೆ~ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.`ವಿವಿಧ ರಾಜ್ಯಗಳ ಯುವತಿಯರಿಗೆ ಕೆಲಸ ಕೊಡಿಸುವುಗಾಗಿ ನಂಬಿಸಿ ನಗರಕ್ಕೆ ಕರೆದುಕೊಂಡು ಬಂದು ಬಾರ್‌ಗಳಲ್ಲಿ ನೃತ್ಯ ಮಾಡುವಂತೆ ಅವರ ಮೇಲೆ ಒತ್ತಡ ಹೇರುತ್ತಿರುವ ಹಾಗೂ ಅವರನ್ನು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಈ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ~ ಎಂದು ಮಿರ್ಜಿ ಹೇಳಿದ್ದಾರೆ.`ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಹಿಳೆಯರನ್ನು ಶೋಷಿಸು ವವರ ಹಾಗೂ ಕಾನೂನು ಉಲ್ಲಂಘಿಸುವವರ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ~ ಎಂದು ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry