ಬೆಳಗಾವಿ: `ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿವಾರಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು' ಎಂದು ಜಿಲ್ಲಾಧಿಕಾರಿ ಎನ್.ಜಯರಾಂ ಹೇಳಿದರು.

ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ ಹಾಗೂ ಕಾರ್ಮಿಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಪ್ರಗತಿಗೆ ಮಾರಕವಾಗಿರುವ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಜಿಲ್ಲಾ ಆಡಳಿತ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಅಂಟಿದ ಒಂದು ರೋಗವಾಗಿದೆ. ಸಂವಿಧಾನಾತ್ಮಕವಾಗಿ ಇದನ್ನು ನಿಷೇಧಿಸಿದರೂ ಸಹ ಇನ್ನೂ ಕೆಲವು ಕಡೆ ಬಾಲಕಾರ್ಮಿಕರು ಕೆಲಸ ಮಾಡುತ್ತಿರುವುದು ವಿಷಾದನೀಯ. ಶಾಲೆಗಳಲ್ಲಿ ಕಲಿತು ನಲಿಯಬೇಕಾದ ಈ ಬಾಲಕರು ಇಂದು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಪದ್ಧತಿಯನ್ನು ನಿವಾರಿಸಲು ಸರ್ಕಾರದ ಜೊತೆಗೆ ಸ್ವಯಂ ಸೇವಾ ಸಂಸ್ಥೆಗಳು ಸಹ ಕೈಜೋಡಿಸಬೇಕು ಎಂದರು.

ಹೊಟೇಲ್ಗಳಲ್ಲಿ ಹಾಗೂ ಉದ್ದಿಮೆಗಳಲ್ಲಿ ಬಾಲಕಾರ್ಮಿಕ ಮಕ್ಕಳು ಸಿಗುತ್ತಿಲ್ಲವೆಂದು ಹೇಳಲಾಗುತ್ತಿದೆ. ಆದರೆ, ಪ್ರತಿಷ್ಠಿತ ಜನರ ಮನೆಗಳಲ್ಲಿ ಬಾಲಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡು ಬರುತ್ತಿದೆ. ಮನೆ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕರನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸಬೇಕು. ಕೆಲವರು ತಮ್ಮ ಐಷಾರಾಮಿ ಜೀವನಕ್ಕಾಗಿ ಬಾಲಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಸರ್ಕಾರದಿಂದ ಬಾಲಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಬೇಕು. ಅಂದಾಗ ಮಾತ್ರ ಈ ಸಮಸ್ಯೆ ನಿವಾರಣೆಯಾಗಬಹುದು. ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯ ಜೊತೆಗೆ ಇತರ ಇಲಾಖೆಗಳ ಸಮನ್ವಯತೆಯಿಂದ ಕ್ರಿಯಾ ಯೋಜನೆಯೊಂದನ್ನು ಸಿದ್ಧಪಡಿಸಿ ಬಾಲಕಾರ್ಮಿಕ ಪದ್ದತಿ ನಿವಾರಣೆಯಲ್ಲಿ ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡಲು ಶ್ರಮಿಸುವುದಾಗಿ ಜಯರಾಂ ಹೇಳಿದರು.

ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೀಪಾ ಚೋಳನ, ಸರ್ಕಾರದ ಸೌಲಭ್ಯಗಳು ಬಾಲಕಾರ್ಮಿಕರ ಕುಟುಂಬಗಳಿಗೆ ದೊರೆಯುವಂತಾಗಬೇಕು. ಈ ಪ್ರಕ್ರಿಯೆ ಇಂದಿಗೆ ಮಾತ್ರ ಸೀಮಿತವಾಗದೇ ನಿರಂತರವಾಗಿ ನಡೆಯಬೇಕು ಎಂದರು.
ಇಎಸ್ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ನಯನಾ ಜೋಶಿ ಮಾತನಾಡಿ, ಇಂದು ವಿಶ್ವದಲ್ಲಿ 21 ಕೋಟಿ ಬಾಲಕಾರ್ಮಿಕರಿದ್ದು, ಭಾರತದಲ್ಲಿ ಒಂದೂವರೆ ಕೋಟಿ ಬಾಲಕಾರ್ಮಿಕರಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರು ಹಾಗೂ ಜಿಲ್ಲಾ ನ್ಯಾಯಾಧೀಶ ಕೆ.ಎನ್.ಫಣೀಂದ್ರ ಅಧ್ಯಕ್ಷತೆ ವಹಿಸಿ, ಇಂದಿನ ಮಕ್ಕಳು ಮುಂದಿನ ಪ್ರಜೆಗಳು. ಕಾರಣ ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿಯನ್ನು ನಿವಾರಿಸಬೇಕಾಗಿದೆ. ಸಾಮಾಜಿಕ ಜೀವನದ ಬಗ್ಗೆಯೂ ಈ ಮಕ್ಕಳಿಗೆ ಅರಿವು ಮೂಡಿಸಬೇಕಾಗಿದೆ. ಇದರಲ್ಲಿ ಪಾಲಕರ ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.

ಬಾಲಕಾರ್ಮಿಕರನ್ನು ಗುರುತಿಸಲು ತಾಲ್ಲೂಕುವಾರು ಸಮೀಕ್ಷೆ ನಡೆಸಬೇಕು. ಬಾಲಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ವಿಷಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಾಂಘಿಕವಾಗಿ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಪ್ರವೀಣ ಕುಮಾರ ಪ್ರತಿಜ್ಞಾ ವಚನ ಬೋಧಿಸಿದರು. ಬಾಲಕಾರ್ಮಿಕ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಆರೋಗ್ಯ ಕಾರ್ಡುಗಳನ್ನು ವಿತರಿಸಲಾಯಿತು. ನ್ಯಾಯಾಧೀಶ ಮಧುಸೂದನ ಉಪಸ್ಥಿತರಿದ್ದರು. ಸಹಾಯಕ ಕಾರ್ಮಿಕ ಆಯುಕ್ತ ಕೆ.ಜಿ.ಜಾನ್ಸನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಎ.ಜಿ.ಮುಳವಾಡಮಠ ಸ್ವಾಗತಿಸಿದರು. ಕಾರ್ಮಿಕ ಅಧಿಕಾರಿ ಎಚ್.ಎನ್.ರಮೇಶ ವಂದಿಸಿದರು.

`ಮಕ್ಕಳ ಅಭಿವೃದ್ಧಿಗೆ ಶ್ರಮಿಸಿ'
ಬೆಳಗಾವಿ: `ಪ್ರತಿಯೊಂದು ಮಗುವಿನಲ್ಲಿಯೂ ಪ್ರತಿಭೆ ಇರುತ್ತದೆ. ಪಾಲಕರು ಹಾಗೂ ಶಿಕ್ಷಕರು ಆ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡುವ ಮೂಲಕ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು' ಎಂದು ಸಿದ್ದೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಲ್.ಸಿ.ಮೆಳವಂಕಿ ಹೇಳಿದರು.

ಜಿಲ್ಲಾ ಆಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಹಾಗೂ ಬಾಲಕಾರ್ಮಿಕ ಮಕ್ಕಳ ಪುನರ್ವಸತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಇಲ್ಲಿನ ಕಣಬರ್ಗಿಯ ಬಾಲಕಾರ್ಮಿಕ ಪುನರ್ವಸತಿ ಕೇಂದ್ರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರ್ವಾಂಗೀಣ ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ಅವರು, ಸರ್ಕಾರವು ಬಾಲಕಾರ್ಮಿಕ ಮಕ್ಕಳ ಪುನರ್ವಸತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಪ್ರಾಚಾರ್ಯೆ ಸುರೇಖಾ ಪಾಟೀಲ, ಕಿರಣ ಚೌಗಲಾ, ಶಕುಂತಲಾ ಅಷ್ಟಗಿ, ಶ್ವೇತಾ ಟಕ್ಕೇಕರ್ ಉಪಸ್ಥಿತರಿದ್ದರು. ಛಾಯಾ ಕುಂಬಾರ ವಂದಿಸಿದರು. ನಂತರ ಸಂಗೀತ ಕುರ್ಚಿ, ಗೋಣಿ ಚೀಲ ಓಟದ ಸ್ಪರ್ಧೆ, ಲಿಂಬು ಚಮಚ ಓಟ ಸೇರಿದಂತೆ ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.