ಭಾನುವಾರ, ಆಗಸ್ಟ್ 1, 2021
21 °C

ಬಾಲಕಾರ್ಮಿಕ ಪದ್ಧತಿ: ಹೋರಾಟ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಬುರ್ಗಾ:  ಗ್ರಾಮೀಣ ಪ್ರದೇಶಗಳಲ್ಲಿ ಬಡತನದ ನೆಪವೊಡ್ಡಿ ಮಕ್ಕಳನ್ನು ಶಾಲೆಗೆ ಕಳುಹಿಸದೇ ಬಾಲ ಕಾರ್ಮಿಕರನ್ನಾಗಿ ಮಾಡಲಾಗುತ್ತಿದೆ. ಈ ವ್ಯವಸ್ಥೆ ವಿರುದ್ಧ ಸಂಘಟನಾತ್ಮಕವಾಗಿ ಹೋರಾಟ ನಡೆಯಬೇಕಿದೆ ಎಂದು ಮಕ್ಕಳ ರಕ್ಷಣಾ ಯೋಜನೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ಧನಂಜಯಕುಮಾರ ಹೇಳಿದರು.ಸ್ಥಳೀಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಮಕ್ಕಳ ಮತ್ತು ಮಹಿಳೆಯರ ಸಾಗಾಣಿಕ ಹಾಗೂ ಮಾರಾಟ ತಡೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸಾರ್ವಜನಿಕರ ಮನವೊಲಿಸುವುದು ಕಷ್ಟದ ಕೆಲಸವಾಗಿದ್ದರೂ ಅದರಿಂದಾಗುವ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು. ಈ ಮೂಲಕ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಬೇಕು ಎಂದು ಸಲಹೆ ಮಾಡಿದರು.ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಕ್ಕಳು ಮತ್ತು ಮಹಿಳೆಗೆ ಸಂಬಂಧಿಸಿದಂತೆ ಅನೇಕ ಅಕ್ರಮಗಳು ನಡೆಯುತ್ತಲೇ ಇವೆ. ಇಂಥ ಅನಿಷ್ಟಗಳ ನಿಯಂತ್ರಣಕ್ಕೆ ಶ್ರಮಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದರು.ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ವ್ಯವಸ್ಥಾಪಕ ಹರೀಶ ಜೋಗಿ ಮಾತನಾಡಿದರು. ಯೋಜನೆಯ ತರಬೇತಿದಾರ ಉಸ್ಮಾನ್, ಗೆದಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ, ವಲಯ ಸಂಪನ್ಮೂಲ ಕೇಂದ್ರದ ದೇವಪ್ಪ ವಾಲ್ಮೀಕಿ, ಸಂಪನ್ಮೂಲ ವ್ಯಕ್ತಿಗಳಾದ ಲಲಿತಾ ನಾಯ್ಕರ್, ಸಿಆರ್‌ಪಿ ವೀರನಗೌಡ ಪಾಟೀಲ್ ಮತ್ತಿತರರು ವೇದಿಕೆಯಲ್ಲಿದ್ದರು. ಕಲ್ಲಪ್ಪ ತಳವಾರ ನಿರೂಪಿಸಿದರು. ಸಿದ್ಧರೆಡ್ಡಿ ಅವರು ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.