ಮಂಗಳವಾರ, ಮೇ 11, 2021
25 °C

ಬಾಲಕಿ ಕೊಲೆ: ಆರು ಜನರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವಲಗುಂದ: ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸ್ದ್ದಿದು, ಆತನ ವಿರುದ್ಧ ಸೇಡು ತೀರಿಸಿಕೊಳ್ಳಲು ಅವನ 8 ವರ್ಷದ ತಂಗಿಯನ್ನೇ ಕೊಲೆ ಮಾಡಿದ ಘಟನೆ ತಾಲ್ಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿನಿ ಸವಿತಾ ಬೆಳವಡಿ, ಶಿವಪುತ್ರಪ್ಪ ಬೆಳವಡಿ, ಹನಮಂತಪ್ಪ ಬೆಳವಡಿ, ಶಿವಕ್ಕ ಬೆಳವಡಿ,  ಗಂಗಾಧರ ಬೆಳವಡಿ ಹಾಗೂ ಸುರೇಶ ಬೆಳವಡಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಶಂಸೆ: ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಸಿಪಿಐ ಎಸ್.ಎಸ್.ಪಡೋಲಕರ, ಪಿಎಸ್‌ಐ ವೆಂಕಟಸ್ವಾಮಿ ಹಾಗೂ ತನಿಖಾ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರವಿಕುಮಾರ ಶ್ಲಾಘಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.