ಶನಿವಾರ, ಜೂನ್ 12, 2021
24 °C

ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಯುವಕನಿಗೆ ಮರಣ ದಂಡನೆ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ, ಆಕೆಯನ್ನು ಕೊಲೆ ಮಾಡಿದ್ದ ಈರಪ್ಪ ಸಿದ್ದಪ್ಪ ಮುರಗಣ್ಣವರ ಎಂಬ ಯುವಕನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.ಗದಗ ಜಿಲ್ಲಾ ನ್ಯಾಯಾಲಯದ ಇತಿಹಾಸದಲ್ಲೇ ಮರಣದಂಡನೆ  ತೀರ್ಪು ಬಂದಿರುವ ಮೊದಲ ಪ್ರಕರಣ ಇದಾಗಿದೆ. ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಆರ್.ಜೆ. ಸತೀಶ್ ಸಿಂಗ್ ಅವರು  ಮರಣದಂಡನೆ ವಿಧಿಸಿದ್ದಾರೆ.ಘಟನೆ ವಿವರ: ನರಗುಂದ ತಾಲ್ಲೂಕಿನ ಖಾನಾಪುರದಲ್ಲಿ 2010ರ ಡಿಸೆಂಬರ್ 28ರಂದು ಮನೆಯಲ್ಲಿ ಟಿವಿ ನೋಡುತ್ತಾ ಕುಳಿತ್ತಿದ್ದ ಬಾಲಕಿಯನ್ನು ಬಿಸ್ಕೆಟ್ ಕೊಡಿಸುತ್ತೇನೆ ಎಂದು ಹೇಳಿ ಈರಪ್ಪ ಹೊರಗೆ ಕರೆದುಕೊಂಡು ಹೋಗಿ ಅತ್ಯಾಚಾರ ವೆಸಗಿ, ನಂತರ ಬಾಲಕಿಯನ್ನು ಕೊಲೆ ಮಾಡಿ ಶವವನ್ನು ಚೀಲದಲ್ಲಿ ಹಾಕಿಕೊಂಡು ಹೋಗಿ ಬೆಣ್ಣೆಹಳ್ಳಕ್ಕೆ ಎಸೆದಿದ್ದ.ಪ್ರಕರಣದ ತನಿಖೆ ನಡೆಸಿದ ನರಗುಂದ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ವಿಜಯ ಕುಮಾರ ತಳವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಎಸ್.ಆರ್. ಶಿಂಧೆ ವಾದಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.