ಬಾಲಕಿ ಮೇಲೆ ಅತ್ಯಾಚಾರ

7

ಬಾಲಕಿ ಮೇಲೆ ಅತ್ಯಾಚಾರ

Published:
Updated:

ಕುಷ್ಟಗಿ: ತಾಲ್ಲೂಕಿನ ಹೂಲಗೇರಿ ಗ್ರಾಮದಲ್ಲಿ 9 ವರ್ಷದ ಬಾಲಕಿ ಮೇಲೆ ಭಾನುವಾರ ಅತ್ಯಾಚಾರ ನಡೆದ ಘಟನೆ ವರದಿಯಾಗಿದೆ.

`ಬಾಲಕಿಯನ್ನು ಸೋಮವಾರ ಬೆಳಿಗ್ಗೆ ಇಳಕಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಜೀವಕ್ಕೆ ಯಾವುದೇ ತೊಂದರೆ ಇಲ್ಲ' ಎಂದು ಹನಮಸಾಗರ ಠಾಣೆ ಸಬ್ ಇನ್‌ಸ್ಪೆಕ್ಟರ್ ನೇತ್ರಾವತಿ ಪಾಟೀಲ ತಿಳಿಸಿದ್ದಾರೆ.`ಭಾನುವಾರ ಬೆಳಿಗ್ಗೆ 11 ಗಂಟೆಗೆ ಪಕ್ಕದ ತಾಂಡಾದಲ್ಲಿನ ಗೆಳತಿಯ ಮನೆಯಿಂದ ವಾಪಸಾಗುತ್ತಿದ್ದಾಗ 20 ವರ್ಷದ ಯುವಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ' ಎಂದು ಬಾಲಕಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. `ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಕೆಲವು ಶಂಕಿತರನ್ನು ಹಾಜರುಪಡಿಸಲಾಗಿದೆ. ಆದರೆ ಬಾಲಕಿಯು ಯಾರನ್ನೂ ಗುರುತಿಸಿಲ್ಲ' ಎಂದು ತನಿಖೆ ನಡೆಸುತ್ತಿರುವ ಸರ್ಕಲ್ ಇನ್‌ಸ್ಪೆಕ್ಟರ್ ನೀಲಪ್ಪ ಓಲೇಕಾರ ತಿಳಿಸಿದರು.ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ, ಡಿವೈಎಸ್‌ಪಿ ಬಸವರಾಜ ಬಾವಲತ್ತಿ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ     ಭೇಟಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry