ಬಾಲಕೃಷ್ಣೇಗೌಡ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

7

ಬಾಲಕೃಷ್ಣೇಗೌಡ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Published:
Updated:

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರ ಹಿರಿಯ ಪುತ್ರ ಎಚ್.ಡಿ.ಬಾಲಕೃಷ್ಣೇಗೌಡ ಅವರ ಬೆಂಗಳೂರಿನಲ್ಲಿರುವ ಮನೆ ಹಾಗೂ ಕಚೇರಿ ಸೇರಿದಂತೆ ಮೈಸೂರಿನಲ್ಲಿರುವ ಅವರ ಸಂಬಂಧಿಕರ ಮನೆಗಳ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. 

ಬಾಲಕೃಷ್ಣೇಗೌಡ ಅವರು ಸರ್ಕಾರಿ ಸೇವೆಯಲ್ಲಿದ್ದಾಗ ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಈ ದಾಳಿಯನ್ನು ನಡೆಸಿದ್ದಾರೆ

ದಾಳಿಯ ಸಮಯದಲ್ಲಿ ಅಧಿಕಾರಿಗಳು ಹಲವು ದಾಖಲೆಗಳನ್ನು ಪರೀಶಿಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬಾಲಕೃಷ್ಣೇಗೌಡ ಅವರು ಸರ್ಕಾರಿ ಸೇವೆಯಲ್ಲಿರುವಾಗ ತಮ್ಮ ಆದಾಯಕ್ಕಿಂತ ಹೆಚ್ಚು ಆಸ್ತಿಯನ್ನು ಸಂಪಾದಿಸಿದ್ದಾರೆ ಎಂದು ಆರೋಪಿಸಿ ಭದ್ರಾವತಿ ಮೂಲದ ಎಸ್.ಎನ್. ಬಾಲಕೃಷ್ಣ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry