ಚಾಮರಾಜನಗರ: `ಅನಿಷ್ಟ ಬಾಲ್ಯ ವಿವಾಹ ಪದ್ಧತಿಯ ನಿರ್ಮೂಲನೆಗೆ ಸಾರ್ವಜನಿಕರ ಸಹಭಾಗಿತ್ವದ ಅಗತ್ಯವಿದೆ. ಜತೆಗೆ, ಆಚರಣೆ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಿದೆ~ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ ಹೇಳಿದರು.

ಸಮೀಪದ ಮರಿಯಾಲದ ಜೆಎಸ್ಎಸ್ ರುಡ್ಸೆಟ್ ಸಂಸ್ಥೆಯಲ್ಲಿ ಜಿಲ್ಲಾ ಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜೆಎಸ್ಎಸ್ ರುಡ್ಸೆಟ್ನಿಂದ ಮಂಗಳವಾರ ಮಹಿಳೆಯರ, ಮಕ್ಕಳ ಸಾಗಾಣಿಕೆ, ಬಾಲ್ಯ ವೇಶ್ಯಾ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಡತನ ಸೇರಿದಂತೆ ಇತರೇ ಸಾಮಾಜಿಕ ಕಾರಣಗಳಿಂದ ಮಹಿಳೆ ಯರು, ಮಕ್ಕಳ ಸಾಗಾಣಿಕೆ ಹಾಗೂ ಬಾಲ್ಯ ವೇಶ್ಯಾ ಪದ್ಧತಿ ನಡೆಯುತ್ತಿದೆ ಎಂದ ಅವರು, ಮಹಿಳೆಯರಿಗೆ ಸೂಕ್ತ ಶಿಕ್ಷಣ ನೀಡಬೇಕಿದೆ. ಮೂಢನಂಬಿಕೆಗೆ ಒಳಗಾಗದಂತೆ ಅವರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಕೆ. ಈಶ್ವರ್ ಮಾತನಾಡಿ, ಬಾಲ್ಯವಿವಾಹ, ವೇಶ್ಯಾವಾಟಿಕೆ ನಿರ್ಮೂಲನೆ ಸಂಬಂಧ ಗ್ರಾಮಮಟ್ಟದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿ ಹೆಚ್ಚಿದೆ. ಹೀಗಾಗಿ, ಗ್ರಾಮೀಣರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯ್ಕ ಮಾತನಾಡಿ, `ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ಗ್ರಾಮ ಪಂಚಾಯಿತಿ ವಿಶೇಷ ಗಮನಹರಿಸಬೇಕು. ಕೆಲವೊಮ್ಮೆ ಮಾಹಿತಿ ಕೊರತೆಯಿಂದ ಜಿಲ್ಲಾ ಪಂಚಾಯಿತಿಗೆ ಈ ವಿಚಾರಗಳು ಗಮನಕ್ಕೆ ಬರುವುದಿಲ್ಲ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧ ಗ್ರಾಮಮಟ್ಟದಲ್ಲಿ ಜಾಗೃತಿ ಮೂಡಿಸಬೇಕಿದೆ~ ಎಂದರು.

ಗ್ರಾಮಮಟ್ಟದಲ್ಲಿ ಮಾಸಿಕ ಸಭೆ ನಡೆಯದಿದ್ದರೆ ಸರ್ಕಾರದ ಅನುದಾನ ಕೂಡ ಖೋತ ಆಗುವ ಸಂಭವವಿದೆ ಎಂದರು.

ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಬಿ.ಪಿ. ಪುಟ್ಟಬುದ್ಧಿ ಮಾತನಾಡಿ, ಶಿಕ್ಷಣದ ಕೊರತೆ ಪರಿಣಾಮ ಗ್ರಾಮೀಣರು ಮೂಢನಂಬಿಕೆಗಳಿಗೆ ಬಲಿಯಾಗುತ್ತಿದ್ದಾರೆ. ಬಾಲ್ಯವಿವಾಹ, ವೇಶ್ಯಾವಾಟಿಕೆ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾದರೆ ಮಾತ್ರವೇ ದೇಶ ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶೇಹೆರ್ಬಾನು, ಅಭಿವೃದ್ಧಿ ಅಧಿಕಾರಿ ಡಾ.ಎಸ್. ದಿವಾಕರ್, ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟಾನ್ಲಿ, ಪರಶುರಾಮ್, ಜೆಎಸ್ಎಸ್ ರುಡ್ಸೆಟ್ ಸಂಸ್ಥೆಯ ಯೋಜನಾಧಿಕಾರಿ ಬಿ.ಎಂ. ಚಂದ್ರಶೇಖರ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.