ಬಾಲ್ಯ ವಿವಾಹ ತಡೆಗೆ ಕಾರ್ಯಾಗಾರ: ಸಚಿವೆ ಸಲಹೆ

7

ಬಾಲ್ಯ ವಿವಾಹ ತಡೆಗೆ ಕಾರ್ಯಾಗಾರ: ಸಚಿವೆ ಸಲಹೆ

Published:
Updated:

ಬೆಂಗಳೂರು: ಬಾಲ್ಯವಿವಾಹಗಳು ನಡೆಯದಂತೆ ಜಾಗೃತಿ ಮೂಡಿಸಲು ಶಾಲೆ ಮತ್ತು ಪದವಿಪೂರ್ವ ಕಾಲೇ­ಜುಗಳಲ್ಲಿ ಕಾರ್ಯಾಗಾರಗಳನ್ನು ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಅಧಿಕಾರಿಗಳಿಗೆ ಸೂಚಿಸಿದರು.ನಗರದಲ್ಲಿ ಗುರುವಾರ ರಾಜ್ಯದ ಎಲ್ಲ ಜಿಲ್ಲೆಗಳ ಇಲಾಖೆಯ ಉಪ ನಿರ್ದೇಶಕರು ಮತ್ತು ಮಕ್ಕಳ ಅಭಿ­ವೃದ್ಧಿ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಬಾಲ್ಯ­ವಿವಾಹ ಪ್ರಕರಣಗಳು ಹೆಚ್ಚು ನಡೆ­ಯುತ್ತಿರುವುದು ವರದಿ­ಯಾ­ಗಿದೆ. ಆದ್ದರಿಂದ, ಬಾಲ್ಯವಿವಾಹ ತಡೆ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಲಹೆ ನೀಡಿದರು.ಸರ್ಕಾರದ ಸೌಲಭ್ಯಗಳ ಬಗ್ಗೆ ಅಂಗವಿಕಲರಿಗೆ ಮತ್ತು ಮಹಿಳೆ­ಯರಿಗೆ ಸಮರ್ಪಕವಾದ ಮಾಹಿತಿ­ಯೇ ಇಲ್ಲ. ವಾರ್ತಾ ಇಲಾಖೆ ಸಹಯೋಗ ದೊಂದಿಗೆ ಜಿಲ್ಲಾಮಟ್ಟ­ದಲ್ಲಿ ಇಲಾಖೆಗಳ ಸೌಲಭ್ಯಗಳ ಬಗ್ಗೆ ಪ್ರಚಾರಾಂದೋಲನ ಹಮ್ಮಿಕೊಳ್ಳ­ಬೇಕು ಎಂದು ಸೂಚಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry