ಮಂಗಳವಾರ, ಏಪ್ರಿಲ್ 13, 2021
32 °C

ಬಾಲ್ಯ ವಿವಾಹ ತಡೆಗೆ ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳವಳ್ಳಿ: ಪಟ್ಟಣದಲ್ಲಿ ಶನಿವಾರ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಜಾಥಾ ನಡೆಯಿತು.

ತಾಲ್ಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬರ್ಡ್ಸ್ ಸಂಸ್ಥೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ 1098, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.ಪಟ್ಟಣದ ತಾಲ್ಲೂಕು ಕಚೇರಿ ಬಳಿ ಜಾಥಾಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶ ಜೆ.ವಿ. ಕುಲಕರ್ಣಿ ಚಾಲನೆ ನೀಡಿದರು. ಬರ್ಡ್ಸ್ ಸಂಸ್ಥೆಯ ನಿರ್ದೇಶಕ ವೆಂಕಟೇಶ್ ಮಾತನಾಡಿ, ಬಾಲ್ಯ ವಿವಾಹ ಮಾಡುವುದು ಅಪರಾಧ. ಇಂತಹ ಪ್ರಕರಣ ಪತ್ತೆಯಾದರೆ ತಪ್ಪಿತಸ್ಥರಿಗೆ ಎರಡು ವರ್ಷ ಸೆರೆವಾಸ, ಒಂದು ಲಕ್ಷ ರೂಪಾಯಿ ದಂಡ ತೆರಬೇಕಾಗುತ್ತದೆ. ಇಂತಹ ವಿವಾಹಗಳಿಗೆ ಅಕ್ಕಪಕ್ಕದ ಮನೆಯವರು, ಸ್ನೇಹಿತರು ಸಹಕಾರ ನೀಡಬಾರದು ಎಂದು ತಿಳಿಸಿದರು.ನ್ಯಾಯಾಧೀಶ ಡಿ. ಕಮಲಾಕ್ಷ, ಸಿಡಿಪಿಒ ಅರುಂಧತಿ, ಶಿಕ್ಷಣ ಇಲಾಖೆಯ ರೇವಣಸಿದ್ದಪ್ಪ ಇತರರು ಹಾಜರಿದ್ದು. ಹಲವು ಶಾಲೆಗಳ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿ ಘೋಷಣೆ ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಸಾಗಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.