ಬಾಲ್‌ಬ್ಯಾಡ್ಮಿಂಟನ್ ತಂಡಕ್ಕೆ ಪ್ರಥಮ ಸ್ಥಾನ

7

ಬಾಲ್‌ಬ್ಯಾಡ್ಮಿಂಟನ್ ತಂಡಕ್ಕೆ ಪ್ರಥಮ ಸ್ಥಾನ

Published:
Updated:

ಚಾಮರಾಜನಗರ: ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಾಮರಾಜನಗರ ಬಾಲ್‌ಬ್ಯಾಡ್ಮಿಂಟನ್ ತಂಡ ಪ್ರಥಮ ಸ್ಥಾನಗಳಿಸಿದೆ.ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅ. 14ರಿಂದ ನಡೆಯುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ. ಜತೆಗೆ, ಈ ತಂಡವು ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲೆಯಿಂದ ಪ್ರತಿನಿಧಿಸುತ್ತಿರುವ ಏಕೈಕ ತಂಡ ಎಂಬುದು ವಿಶೇಷ.ಗುಂಡ್ಲುಪೇಟೆ ತಾಲ್ಲೂಕಿನ ಹೊನ್ನಶೆಟ್ಟರ ಹುಂಡಿಯ ದೊಡ್ಡಪ್ಪಾಜಿ 5000 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಬಾಲ್‌ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಮಲ್ಲೆೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry