ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರರ ವಿರುದ್ಧ ವಕೀಲ ಸಿರಾಜಿನ್ ಬಾಷಾ ಸಲ್ಲಿಸಿರುವ ಐದನೇ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ, ಬೇಡವೇ ಎಂಬುದರ ಬಗ್ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಇದೇ 21ರಂದು ಆದೇಶ ಪ್ರಕಟಿಸಲಿದೆ.

2011ರ ಜನವರಿ 24ರಂದು ಸಿರಾಜಿನ್ ಬಾಷಾ ಈ ದೂರನ್ನು ಲೋಕಾಯುಕ್ತ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 14 ತಿಂಗಳ ಬಳಿಕ ಪ್ರಾಥಮಿಕ ಹಂತದ ವಿಚಾರಣೆ ಪೂರ್ಣಗೊಂಡಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದರು. ಅರ್ಜಿಯನ್ನು ಅಂಗೀಕರಿಸುವ ಸಂಬಂಧ ಏಪ್ರಿಲ್ 21ಕ್ಕೆ ಆದೇಶ ನೀಡುವುದಾಗಿ ಪ್ರಕಟಿಸಿ, ವಿಚಾರಣೆ ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.