ಗುರುವಾರ , ಏಪ್ರಿಲ್ 22, 2021
27 °C

ಬಿಇಒಗಳಿಂದ ಕರ್ತವ್ಯ ಲೋಪ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಬ್ಲಾಕ್ ಅನುಷ್ಠಾನ ಸಮಿತಿ (ಬಿಐಸಿ) ಅನುಮೋದನೆ ಪಡೆಯದೇ ಸರ್ವ ಶಿಕ್ಷಣ ಅಭಿಯಾನದಡಿ ಶಾಲಾ ಆವರಣಗೋಡೆ ನಿರ್ಮಾಣಕ್ಕೆ ಸಂಬಂಧಿಸಿದ ಅನುದಾನವನ್ನು ಎಸ್‌ಡಿಎಂಸಿ ಖಾತೆಗಳಿಗೆ ಜಮೆ ಮಾಡಿರುವ ಪ್ರಕರಣಕ್ಕೆ ತಿರುವು ಪಡೆದುಕೊಂಡಿದೆ.ತಮ್ಮ ಗಮನಕ್ಕೆ ತರದೇ ಲಕ್ಷಾಂತರ ರೂಪಾಯಿ ಅನುದಾನವನ್ನು ಎಸ್‌ಡಿಎಂಸಿ ಖಾತೆಗಳಿಗೆ ಜಮೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಶಾಸಕರು ಅಭಿಯಾನ ಉಪ ಯೋಜನಾ ಸಮನ್ವಯಾಧಿಕಾರಿ (ಡಿವೈಪಿಸಿ) ಹಾಗೂ ಡಿಡಿಪಿಐ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.ಆದರೆ, ಅನುದಾನವನ್ನು ಶಾಸಕರ ಗಮನಕ್ಕೆ ತಂದು ಡಿಐಸಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುವಲ್ಲಿ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳು ವಿಫಲರಾಗಿದ್ದಾರೆ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.ಬುಧವಾರ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಡಿವೈಪಿಸಿ ಗುರುಲಿಂಗಯ್ಯ, 2012-13ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅನುಮೋದನೆಗೊಂಡಂತೆ ತಾಲ್ಲೂಕಿಗೆ ಸಂಬಂಧಿಸಿದ ಯೋಜನೆಯನ್ನು ಬಿಐಸಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಿಗೆ ಜು. 2ರಂದೇ ಪತ್ರ ಬರೆಯಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.