ಚಿಕ್ಕಮಗಳೂರು: ಶಿಕ್ಷಕ ಸಮುದಾಯಕ್ಕೆ ಮಾನಸಿಕ ಹಿಂಸೆ ಮತ್ತು ಕಿರುಕುಳ ನೀಡುತ್ತಿರುವ ಮೂಡಿಗೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಲ್.ಶರಶ್ಚಂದ್ರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಶಿಕ್ಷಕರು ಗುರುವಾರ ಜಿಲ್ಲಾ ಪಂಚಾಯಿತಿ ಕಚೇರಿ ಸಮುಚ್ಚಯದ ಎದುರು ಪ್ರತಿಭಟಿಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಶಿಕ್ಷಕರು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ದೇವರಾಜಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿ ಘೋಷಣೆಗಳನ್ನು ಕೂಗಿ, ಮೂಡಿಗೆರೆ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಜಿಲ್ಲೆಯಿಂದ ವರ್ಗಾಯಿಸಬೇಕೆಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ದೇವರಾಜಪ್ಪ ಮಾತನಾಡಿ, ಮೂಡಿಗೆರೆ ಕ್ಷೇತ್ರ ಶಿಕ್ಷಣಾಧಿಕಾರಿ, ಪ್ರಾಮಾಣಿಕ ಶಿಕ್ಷಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಕೆ.ಭುವನೇಶ್, ಪ್ರಧಾನ ಕಾರ್ಯದರ್ಶಿ ಎಸ್.ಟಿ.ರಾಜಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.