ಗುರುವಾರ , ಏಪ್ರಿಲ್ 22, 2021
22 °C

ಬಿಎಂಆರ್‌ಸಿಎಲ್ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಿಕೊಡುವಲ್ಲಿ ಬಿಎಂಆರ್‌ಸಿಎಲ್ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಬಸವೇಶ್ವರನಗರ ಕೊಳೆಗೇರಿ ನಿವಾಸಿಗಳು ಹಾಗೂ ಕೆಲ ಸಂಘಟನೆಗಳ ಸದಸ್ಯರು ಶಾಂತಿನಗರದಲ್ಲಿರುವ ಬಿಎಂಆರ್‌ಸಿಎಲ್ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.ಈ ಸಂದಂರ್ಭದಲ್ಲಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಕಚೇರಿಯಿಂದ ಹೊರಬರಲಿಲ್ಲ ಎಂಬ ಕಾರಣಕ್ಕೆ ಶಿವು ಮತ್ತು ರಮೇಶ್ ಎಂಬುವರು ಮೈಮೇಲೆ ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು. ಕೂಡಲೇ ಸ್ಥಳಕ್ಕೆ ಬಂದ ವಿಲ್ಸನ್‌ಗಾರ್ಡನ್ ಪೊಲೀಸರು ಅವರಿಬ್ಬರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.`ಬಸವೇಶ್ವರನಗರ ಕೊಳೆಗೇರಿ ಪ್ರದೇಶದ 50 ಕುಂಟುಂಬಗಳನ್ನು 2008ರಲ್ಲಿ ಸ್ಥಳಾಂತರಿಸಿದ್ದ ಬಿಎಂಆರ್‌ಸಿಎಲ್, ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಿ ಕೊಡುವುದಾಗಿ ಹೇಳಿತ್ತು. ಈ ಪೈಕಿ 48 ಕುಂಟುಂಬಗಳಿಗೆ ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಶಂಕರಿ ಮತ್ತು ಅಂಜಲಿ ಎಂಬುವರಿಗೆ ಮನೆಗಳು ಸಿಕ್ಕಿಲ್ಲ~ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬಳಿಕ ಆ ಇಬ್ಬರು ಸಂತ್ರಸ್ಥರನ್ನು ಭೇಟಿ ಮಾಡಿದ ಬಿಎಂಆರ್‌ಸಿಎಲ್ ಅಧಿಕಾರಿಗಳು, ವಾರದೊಳಗೆ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.