ಗುರುವಾರ , ಏಪ್ರಿಲ್ 15, 2021
21 °C

ಬಿಎಂಟಿಸಿ ನೌಕರನ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  `ಶಾಂತಿನಗರ ಸೆಂಟ್ರಲ್ ವರ್ಕ್‌ಶಾಪ್ ಬಳಿ ಶನಿವಾರ ಮೃತಪಟ್ಟ ಬಿಎಂಟಿಸಿ ನೌಕರ ಕೇಶವನ್ ಅವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು~ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷ ವಿ.ಜೆ.ಕೆ. ನಾಯರ್ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು `ಕೇಶವನ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಮೃತಪಟ್ಟಿದ್ದಾರೆ. ಅವರ ಸಾವಿಗೂ ಶನಿವಾರ ಸೆಂಟ್ರಲ್ ವರ್ಕ್‌ಶಾಪ್‌ನಲ್ಲಿ ನಡೆದ ಸಿಐಟಿಯು ಜಾಥಾಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ, ನೌಕರನೊಬ್ಬನ ಸಾವಿಗೆ ದುಃಖ ವ್ಯಕ್ತಪಡಿಸುವ ಬದಲಾಗಿ ಎಐಟಿಯುಸಿ ಮುಖಂಡರು ಸಿಐಟಿಯು ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ~ ಎಂದು ಅವರು ದೂರಿದರು.`ಜಾಥಾದ ನೇತೃತ್ವ ವಹಿಸಿದ್ದ ರೇವಪ್ಪ, ಕೆಎಸ್‌ಆರ್‌ಟಿಸಿ ಸಿಐಟಿಯು ಸಂಘದ ಅಧ್ಯಕ್ಷರಾಗಿರುವ ಎಸ್.ಪ್ರಸನ್ನಕುಮಾರ್ ಮತ್ತು ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅವರ ಮೇಲೆ ಕೊಲೆ ಆರೋಪವನ್ನು ಹೊರಿಸಿ ದೂರು ದಾಖಲು ಮಾಡಲಾಗಿದೆ. ಕೇಶವನ್ ಕುಟುಂಬಕ್ಕೆ ಪರಿಹಾರ ನೀಡುವುದನ್ನು ವಿಳಂಬ ಮಾಡಿದರೆ ನ. 7ರಂದು ಕೆಎಸ್‌ಆರ್‌ಟಿಸಿ ಪ್ರಧಾನ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು~ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.