ಗುರುವಾರ , ನವೆಂಬರ್ 21, 2019
26 °C

ಬಿಎಸ್‌ಆರ್ ಕಾಂಗ್ರೆಸ್‌ನಿಂದ ಕಾಂಗ್ರೆಸ್‌ಗೆ ಸೇರ್ಪಡೆ

Published:
Updated:

ಚಿಕ್ಕಮಗಳೂರು: ಬಿಎಸ್‌ಆರ್ ಕಾಂಗ್ರೆಸ್‌ನ ನಗರ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದರು.ಬಿಎಸ್‌ಆರ್ ಕಾಂಗ್ರೆಸ್ ನಗರ ಅಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಜಿಲ್ಲಾ ಘಟಕ ಉಪಾಧ್ಯಕ್ಷ ಗೋಪಾಲ್, ಜಿಲ್ಲಾ ಅಲ್ಪಸಂಖ್ಯಾತರ ಘಟಕ ಉಪಾಧ್ಯಕ್ಷ ಫ್ರಾನ್ಸಿಸ್ ಡೆನ್ನಿ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಶೋಭಾ, ತಾಲ್ಲೂಕು ಘಟಕ ಅಧ್ಯಕ್ಷ ರಶೀದ್, ವಿದ್ಯಾರ್ಥಿ ಯುವ ಮೋರ್ಚಾ ಅಧ್ಯಕ್ಷ ಶರತ್, ನಗರ ಘಟಕ ಪ್ರಧಾನ ಕಾರ್ಯದರ್ಶಿ ನಟರಾಜ್, ಮಲ್ಲಿಕಾರ್ಜುನ್, ಮಖಂಡ ಶ್ರೀಕಾಂತ್, ಸೋಮಶೇಖರ್ ಸೇರಿದಂತೆ ನೂರಾರು ಕಾರ್ಯಕರ್ತರು ಪಕ್ಷ ಸೇರ್ಪ ಡೆಯಾದರು.ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಪಕ್ಷದ ಅಭ್ಯರ್ಥಿ ಕೆ.ಎಸ್.ಶಾಂತೇಗೌಡ, ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸೇರುತ್ತಿರುವ ಕಾರ್ಯಕರ್ತರ ಪಡೆ ನೋಡಿದಾಗ ದೇಶದ ಸಮಸ್ಯೆಗಳಿಗೆ ಕಾಂಗ್ರೆಸ್ ಒಂದೇ ಪರಿಹಾರ. ಯಾವುದೇ ಫಲಾಪೇಕ್ಷೆ ಇಲ್ಲದೆ ಬಿಎಸ್‌ಆರ್ ಕಾಂಗ್ರೆಸ್‌ನ  ಕಾರ್ಯಕರ್ತರು ಪಕ್ಷ ಸೇರುವ ಮೂಲಕ ಬೆಂಬಲ ನೀಡುತ್ತಿರುವುದು ದೊಡ್ಡ ಶಕ್ತಿ ಸಿಕ್ಕಂತಾಗಿದೆ ಎಂದರು.ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎನ್.ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ, ಬಿಎಸ್‌ಆರ್ ಕಾಂಗ್ರೆಸ್‌ನ ನಗರ ಅಧ್ಯಕ್ಷ ಜಗದೀಶ್, ಅಲ್ಪಸಂಖ್ಯಾತರ ಮುಖಂಡ ಆಲೇನಹಳ್ಳಿ ಅಮ್ಜದ್, ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕ ಮಾಜಿ ಅಧ್ಯಕ್ಷ ಚಿಕ್ಕಯ್ಯ, ಮುಖಂಡ ಗಂಗಾಧರ್ ಮೇಸ್ಟ್ರು ಇನ್ನಿತರರು ಇದ್ದರು.

ಪ್ರತಿಕ್ರಿಯಿಸಿ (+)