ಚಿಕ್ಕಮಗಳೂರು: ರಾಜ್ಯದಾದ್ಯಂತ ಸಂಕಲ್ಪಯಾತ್ರೆ ಕೈಗೊಂಡಿರುವ ಬಿಎಸ್ಆರ್ ಕಾಂಗ್ರೆಸ್ ನಾಯಕ ಶ್ರೀರಾಮಲು ಅವರಿಗೆ ಮಡಿಕೇರಿಯಲ್ಲಿ ಬಹಿರಂಗ ಸಭೆ ನಡೆಸಲು ಜಿಲ್ಲಾಡಳಿತ ಅನುಮತಿ ನಿರಾಕರಿಸಿರುವುದು ಮತ್ತು ಸ್ಥಳೀಯ ಕಿಡಿಗೇಡಿಗಳು ಬಿಎಸ್ಆರ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, , ಬ್ಯಾನರ್ ಬಂಟಿಂಗ್ಸ್ಗಳನ್ನು ಕಿತ್ತು ಹಾಕಿದ್ದರುವುದನ್ನು ಖಂಡಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಣ್ಣವೇಲು, ಬಿ.ಎಸ್.ಆರ್. ಕಾಂಗ್ರೆಸ್ ಸಂಸ್ಥಾಪಕ ಶ್ರೀರಾಮುಲು ಮಡಿಕೇರಿಯಲ್ಲಿ ನಡೆಸಲಿದ್ದ ಸಾರ್ವಜನಿಕ ಬಹಿರಂಗ ಸಭೆಗೆ ಜಿಲ್ಲಾಡಳಿತ ಅಡ್ಡಿಪಡಿಸಿರುವುದು ಸರಿಯಲ್ಲ.

ಪಕ್ಷದ ಶೀಘ್ರ ಬೆಳವಣಿಗೆ ನೋಡಿ ಸಹಿಸಲಾಗದೆ ಇತರೆ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಬ್ಯಾನರ್ ಮತ್ತು ಬಂಟಿಂಗ್ಸ್ ನಾಶ ಮಾಡಿದ್ದಾರೆ. ಜಿಲ್ಲಾಡಳಿತ ಕಿಡಿಗೇಡಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಗಿರೀಶ್, ಶೋಭಾ, ಯಶೋಧಾ, ಲೀಲಾ, ನಾಗರಾಜ್, ಶ್ರೀಕಾಂತ್, ಕೀರ್ತಿರಾಜ್, ಗಂಗಾಧರ್, ರಮೇಶ್, ಸತ್ಯನಾರಾಯಣ್, ಅಭಿರಾಜ್, ಖಲಂದರ್, ಅಮ್ಜದ್, ಫೈರೋ್, ಇಬ್ರಾಹಿಂ ಇನ್ನಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.