ಬಿಎಸ್‌ಆರ್ ಕಾಂಗ್ರೆಸ್ ಸಂಕಲ್ಪ ಯಾತ್ರೆ

7

ಬಿಎಸ್‌ಆರ್ ಕಾಂಗ್ರೆಸ್ ಸಂಕಲ್ಪ ಯಾತ್ರೆ

Published:
Updated:

ಬೆಂಗಳೂರು: ಬಿಎಸ್‌ಆರ್ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಇದೇ 17ರಿಂದ ಜನವರಿ 6ರವರೆಗೆ `ಸಂಕಲ್ಪ ಯಾತ್ರೆ' ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಅಧ್ಯಕ್ಷ ಬಿ. ಶ್ರೀರಾಮುಲು ತಿಳಿಸಿದರು. `17ರಿಂದ 21ರವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಕಲ್ಪ ಯಾತ್ರೆ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 29 ಮತ್ತು 30ರಂದು ಯಾತ್ರೆ ನಡೆಯಲಿದೆ.

ಯಾತ್ರೆಯ ಅಂಗವಾಗಿ ಶಿಕಾರಿಪುರದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗುವುದು' ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.ಜನವರಿ 1ರಿಂದ 3ರವರೆಗೆ ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ. ಜ. 6ರಂದು ದಾವಣಗೆರೆಯಲ್ಲಿ ಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದರು.ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371ನೇ ಕಲಂಗೆ ಸಂಸತ್ತಿನ ಈ ಅಧಿವೇಶನದಲ್ಲಿ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿ ಇದೇ 27 ಮತ್ತು 28ರಂದು ಗುಲ್ಬರ್ಗದಲ್ಲಿ ಉಪವಾಸ ನಡೆಸುವುದಾಗಿ ಅವರು ಪ್ರಕಟಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry