ಗುರುವಾರ , ಮೇ 6, 2021
31 °C

ಬಿಎಸ್‌ಎನ್‌ಎಲ್ ನೌಕರರ ಸಾಂಕೇತಿಕ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು:  ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಎಸ್‌ಎನ್‌ಎಲ್ ನೌಕರರು ಬುಧವಾರ ದೂರಸಂಪರ್ಕ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದರು.ದೂರಸಂಪರ್ಕ ಇಲಾಖೆ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳಲ್ಲಿ ಕೆಲಸ ನಿರ್ವಹಿಸು ತ್ತಿರುವವರಿಗೆ ತುಟ್ಟಿಭತ್ಯೆ ನೀಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ. ಆದರೂ ದೂರ ಸಂಪರ್ಕ ಇಲಾಖೆ ಅನುಸರಿಸುತ್ತಿರುವ ಮಲತಾಯಿ ಧೋರಣೆಯಿಂದ ನೌಕರರಿಗೆ ಮಧ್ಯಂತರ ತುಟ್ಟಿಭತ್ಯೆ ಹೆಚ್ಚಿಸಿಲ್ಲ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.ಕೇಂದ್ರ ಸರ್ಕಾರದ ಅನುಮತಿ ಪಡೆದು ಬೇಡಿಕೆ ಈಡೇರಿಸುವ ಭರವಸೆಯನ್ನು ಈ ಹಿಂದೆ ನೀಡಲಾಗಿತ್ತು. ವರ್ಷ ಕಳೆದರೂ ನೀಡಿದ್ದ ಭರವಸೆ ಈಡೇರಿಸಲು ಮುಂದಾಗದಿರುವುದನ್ನು ವಿರೋಧಿಸಿ ಇಲಾಖೆಯ ಹಿರಿಯ ಅಧಿಕಾರಿಗಳ ಗಮನ ಸೆಳೆಯಲು ಸಾಂಕೇತಿಕ ಪ್ರತಿಭಟನೆ ನಡೆಸುತ್ತಿರುವುದಾಗಿ ಪ್ರತಿಭಟನಾನಿರತ ನೌಕರರು ತಿಳಿಸಿದರು.ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ ಇದೇ 12ರಿಂದ ಜಿಲ್ಲೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ 450ಕ್ಕೂ ಹೆಚ್ಚು ಬಿಎಸ್‌ಎನ್‌ಎಲ್ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಇಲಾಖೆಯ ವಿವಿಧ ಸಂಘಟನೆಗಳ ಮುಖಂಡರು ಹೆಳಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ದಿವಾಕರ ಭಟ್ ಮಾತನಾಡಿದರು. ನೌಕರರ ಯೂನಿಯನ್ ವೇದಿಕೆ ಅಧ್ಯಕ್ಷ ಹಿರಿಯಣ್ಣ, ನೌಕರರ ವಿವಿಧ ಸಂಘಟನೆ ಮುಖಂಡ ರಾದ ಮಂಜೇಗೌಡ, ಸುಂದರೇಶ್, ಗೋಪಾಲಕೃಷ್ಣ, ಚಂದ್ರಶೇಖರ ಭಟ್ ಧರಣಿ ಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.