ಶನಿವಾರ, ಜನವರಿ 18, 2020
20 °C

ಬಿಎಸ್‌ಎಫ್ ಹೆಲಿಕಾಪ್ಟರ್ ಪತನ, ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯ್‌ಪುರ (ಛತ್ತಿಸ್‌ಗಢ್) (ಪಿಟಿಐ): ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಗಡಿ ರಕ್ಷಣಾ ಪಡೆಯ (ಬಿಎಸ್‌ಎಫ್) ಹೆಲಿಕಾಪ್ಟರ್‌ವೊಂದು ಪತನಗೊಂಡು ಅದರಲ್ಲಿದ್ದ ಮೂವರು ಗಾಯಗೊಂಡಿರುವ ಘಟನೆ ಇಲ್ಲಿನ ಮನಾ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಹೆಲಿಕಾಪ್ಟರ್ 100 ಮೀಟರ್ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಪತನಗೊಂಡಿದೆ. ಇದರಲ್ಲಿದ್ದ ಪೈಲಟ್ ಪಿ.ಡಿ.ತಿವಾರಿ ಹಾಗೂ ಆನಂದ ಮತ್ತು ಪಂಕಜ್ ಪಾಲ್ ಎಂಬ ಇಬ್ಬರು ತಾಂತ್ರಿಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು  ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಪೈಲಟ್ ಸ್ಥಿತಿ ಗಂಭೀರವಾಗಿದೆ  ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಸುದ್ಧಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳ ತಂಡವೊಂದು ಈ ಘಟನೆಗೆ ಕಾರಣವಾದ ಅಂಶಗಳ ಪತ್ತೆಗೆ ತನಿಖೆ ನಡೆಸಿದೆ.

ಪ್ರತಿಕ್ರಿಯಿಸಿ (+)