ಹುಮನಾಬಾದ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ತಾಲ್ಲೂಕಿನ ಹಳ್ಳಿಖೇಡ (ಬಿ) ಸಮೀಪ ಇರುವ ಕಾರ್ಖಾನೆ ಆವರಣದಲ್ಲಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.

ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬದಲು ಖಾಸಗೀಕರಣಕ್ಕೆ ಮುಂದಾಗಿರುವ ಸರ್ಕಾರದ ಕ್ರಮ ಖಂಡನೀಯ ಎಂದ ಭಾರತೀಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ತಂಬಾಕೆ, ಕಾರ್ಖಾನೆಗೆ ಕಬ್ಬು ಸಾಗಿರುವ ರೈತರಿಗೆ ಡಿ. 15ರಿಂದ ಹಣ ಪಾವತಿ ಆಗಿಲ್ಲ. ಹೀಗಾಗಿ ಕಾನೂನು ಪ್ರಕಾರ ಶೇ. 15 ರಷ್ಟು ಬಡ್ಡಿ ಸಹಿತವಾಗಿ ಕೂಡಲೇ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ಕಟಾವು ಮತ್ತು ಸಾಗಾಣಿಕೆಯಲ್ಲಿ ಆಗುತ್ತಿರುವ ಅವ್ಯವಹಾರದ ಬಗ್ಗೆ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದರು. ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಕಾರ್ಖಾನೆಗೆ ಆರ್ಥಿಕ ಹೊರೆ ಹೆಚ್ಚಾಗಿದೆ. ಇಂಥ ಸ್ಥಿತಿಯಲ್ಲಿ ಆಡಳಿತ ಮಂಡಳಿ ಹೊಸಬರನ್ನು ಕಾಯಂಗೊಳಿಸಲು ಮುಂದಾಗಿರುವುದು ಸರಿಯಲ್ಲ ಎಂದರು.

ಕಬ್ಬು ಕಟಾವಿಗೆ ರೈತರಿಂದ ಹಣ ಪಡೆಯಲಾಗುತ್ತಿದೆ ಎಂಬ ವಿಷಯದ ಬಗ್ಗೆ ಸಿ.ಡಿ.ಓ. ಶಿವಲಿಂಗಪ್ಪ ಜೊತೆ ರೈತರು ವಾಗ್ವಾದ ನಡೆಸಿದ ಪ್ರಸಂಗವೂ ನಡೆಯಿತು. ಸ್ಥಳಕ್ಕೆ ಭೇಟಿ ನೀಡಿ ತಹಸೀಲ್ದಾರ್ ಎಸ್. ಎನ್. ವಾರಿ ಅವರಿಗೆ ಮನವಿಪತ್ರ ಸಲ್ಲಿಸಿದರು.ಸಂಘದ ಪ್ರಮುಖರಾದ ಮೈನುದ್ದೀನ್ ಲಾಡಜಿ, ವೀರಭೂಷಣ ನಂದಗಾವೆ, ಪ್ರಭುರಾವ ಪಾಟೀಲ್ ಹೊನ್ನಡ್ಡಿ, ಲಕ್ಷ್ಮಣರಾವ ಕಾಳಗಿ, ಸತೀಶ ನಂದೂರೆ, ಕಾಸಿಂ ಅಲಿ, ಲಿಯಾಕತ್ ಅಲಿ ಮತ್ತಿತರು ಸೇರಿದಂತೆ ನೂರಾರು ಜನ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.