ಮಂಗಳವಾರ, ಜೂನ್ 22, 2021
27 °C

ಬಿಎಸ್‌ಪಿ ಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಐಎಎನ್‌ಎಸ್‌): ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಉತ್ತರ ಪ್ರದೇಶದ ಎಲ್ಲ 80 ಲೋಕಸಭೆ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.



ಪಕ್ಷ ಬಲವಾಗಿ ನಂಬಿರುವ ‘ಸಾಮಾಜಿಕ ಸದ್ಭಾವನೆ’ ತತ್ವದಡಿ ಎಲ್ಲ ವರ್ಗದವರಿಗೆ ಪಟ್ಟಿಯಲ್ಲಿ ಪ್ರಾತಿನಿಧ್ಯ ನೀಡಲಾಗಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.



ಪರಿಶಿಷ್ಟ ಜಾತಿಯ 17, ಹಿಂದುಳಿದ ವರ್ಗದ 15, ಮುಸ್ಲಿಂ ಸಮುದಾಯದ 19, ಬ್ರಾಹ್ಮಣ ಸಮುದಾಯದ 21 ಮತ್ತು ಠಾಕೂರ್‌ ಸಮುದಾಯದ ಎಂಟು ಜನರಿಗೆ ಟಿಕೆಟ್‌ ನೀಡಲಾಗಿದೆ ಎಂದು ಹೇಳಿದ್ದಾರೆ.



‘ಮಾರ್ಚ್‌ 22ರಿಂದ ದೇಶದಾದ್ಯಂತ ಸಂಚರಿಸಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತೇನೆ. ಆದರೆ, ಶೇ 90ರಷ್ಟು ಸಮಯವನ್ನು ಉತ್ತರ ಪ್ರದೇಶದಲ್ಲಿ ಪ್ರಚಾರಕ್ಕೆ ಮೀಸಲಿಡುತ್ತೇನೆ’ ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.