ಸೋಮವಾರ, ಜೂನ್ 14, 2021
22 °C

ಬಿಎಸ್‌ಪಿ ಮೊದಲ ಪಟ್ಟಿ: 21 ಹೆಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಹುಜನ ಸಮಾಜವಾದಿ ಪಾರ್ಟಿ (ಬಿಎಸ್‌ಪಿ) ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಶುಕ್ರವಾರ ರಾಜ್ಯದ 21 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊದಲ ಹಂತದ ಪಟ್ಟಿಯಲ್ಲಿ ಚಿಕ್ಕ­ಬಳ್ಳಾಪುರ ಕ್ಷೇತ್ರದಲ್ಲಿ ಮಹಿಳೆಯೊಬ್ಬರಿಗೆ ಅವಕಾಶ ನೀಡಿದ್ದು ಅಂತಿಮ ಪಟ್ಟಿಯಲ್ಲಿ ಕನಿಷ್ಠ ಮೂವರು ಮಹಿಳೆಯರಿಗೆ ಟಿಕೆಟ್ ನೀಡುತ್ತೇವೆ’ ಎಂದರು. ಕರ್ನಾಟಕ, ತಮಿಳುನಾಡು ಮತ್ತು ಪುದುಚೇರಿಯ ಬಿಎಸ್‌ಪಿ ಸಂಯೋಜಕ ಡಾ.ಅಶೋಕ್ ಸಿದ್ಧಾರ್ಥ್ ಮಾತನಾಡಿ, ‘ಮುಂದಿನ 2 ದಿನಗಳಲ್ಲಿ ಅಂತಿಮ ಪಟ್ಟಿ ಬಿಡುಗಡೆ ಮಾಡುತ್ತೇವೆ. ರಾಜ್ಯದಲ್ಲಿ 2 ರಿಂದ 3 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.