ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿರುವುದು ಅಚ್ಚರಿಯನ್ನುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

3–4 ತಿಂಗಳಿಂದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಯಡಿಯೂರಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ನೈತಿಕತೆಯ ಅಧಃಪತನ ತಲುಪಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ನ ಭ್ರಷ್ಟಾಚಾರದ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು, ಈಗ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಇಂದು ಪ್ರಚಾರಕ್ಕೆ ಚಾಲನೆ
ಮುಳಬಾಗಿಲು ಸಮೀಪದ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಸೋಮವಾರ ಪೂಜೆ ಸಲ್ಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ 11ಕ್ಕೆ ಪೂಜೆ ಸಲ್ಲಿಸಿದ ನಂತರ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.