ಶುಕ್ರವಾರ, ಮೇ 20, 2022
26 °C

ಬಿಎಸ್‌ವೈಗೆ ಮುಳುವಾದ ಎರಡು ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಕೀಲರಾದ ಸಿರಾಜಿನ್ ಬಾಷಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಲ್ಲಿಸಿದ್ದ ಎರಡು ಮತ್ತು ಮೂರನೇ ಖಾಸಗಿ ದೂರಿನ ವಿವರಗಳು ಇಂತಿವೆ:ದೂರು- 2

1- ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಸಬಾ ಹೋಬಳಿಯ ಅರಕೆರೆ ಗ್ರಾಮದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 2.05 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವುದು. ಬಳಿಕ ಮುಖ್ಯಮಂತ್ರಿಯವರ ಕುಟುಂಬದ ಸದಸ್ಯರ ಬೇನಾಮಿದಾರರು ಅದನ್ನು ಖರೀದಿಸಿರುವುದು.2- ಬೆಂಗಳೂರು ದಕ್ಷಿಣ ತಾಲ್ಲೂಕಿನ ದೇವರಚಿಕ್ಕನಹಳ್ಳಿಯ ಸರ್ವೇ ನಂಬರ್ 51/1ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಮುಖ್ಯಮಂತ್ರಿಯವರ ಸಹಚರ ಕೆ.ಮಂಜುನಾಥ್ ಅವರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಡಿನೋಟಿಫೈ ಮಾಡಿರುವುದು.3- ಅರ್ಕಾವತಿ ಬಡಾವಣೆಗಾಗಿ ಗೆದ್ದಲಹಳ್ಳಿಯ ಸರ್ವೇ ನಂಬರ್ 42/1ಎ2, 42/4-ಎ2 ಮತ್ತು 42/2ಬಿಗಳಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಮುಖ್ಯಮಂತ್ರಿಯವರ ಸಹಚರರಾದ ವಿ.ಮಂಜುನಾಥ್ ಮತ್ತು ಕೆ.ಶಿವಪ್ಪ ಅವರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಡಿನೋಟಿಫೈ ಮಾಡಿರುವುದು.

ದೂರು- 3

1-ಅಗರ ಗ್ರಾಮದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ 20 ಗುಂಟೆ ಭೂಮಿಯನ್ನು ಅಕ್ರಮವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವುದು.2- ರಾಚೇನಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಡಿನೋಟಿಫೈ ಮಾಡಿರುವುದಕ್ಕಾಗಿ ಹೆಲ್ತ್‌ಝೋನ್ ಅಡ್ವೈಸರ್ಸ್‌ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಅದೇ ಗ್ರಾಮದ ಸರ್ವೇ ನಂಬರ್ 36/1 ಮತ್ತು 37/2ರಲ್ಲಿ ಭೂಮಿ ಪಡೆದಿರುವುದು.9- ಉತ್ತರಹಳ್ಳಿಯ ಸರ್ವೇ ನಂಬರ್ 121ರ 10 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿರುವುದಕ್ಕಾಗಿ ಸಹ್ಯಾದ್ರಿ ಹೆಲ್ತ್‌ಕೇರ್ ಅಂಡ್ ಡಯಾಗ್ನಾಸ್ಟಿಕ್ಸ್ ಮೂಲಕ ಆರ್ಥಿಕ ಅನುಕೂಲ ಪಡೆದಿರುವುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.