ಬೆಂಗಳೂರು: ರಾಜ್ಯ ಮತ್ತು ಪಕ್ಷದ ಹಿತವನ್ನು ನೋಡಿಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಕುರಿತು ಪಕ್ಷದ ಸಂಸದೀಯ ಮಂಡಳಿ ಸಭೆ ನಿರ್ಧರಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬುಧವಾರ ಇಲ್ಲಿ ತಿಳಿಸಿದರು.

ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿರುವ ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ. ಯಡಿಯೂರಪ್ಪ ನಿರ್ದೋಷಿಯಾಗಿ ಹೊರ ಬಂದಿದ್ದಾರೆ. ಅವರ ಮೇಲಿನ ಆರೋಪಗಳನ್ನೇ ಆಧಾರವಾಗಿಟ್ಟುಕೊಂಡು ಟೀಕೆ ಮಾಡುತ್ತಿದ್ದ ಪ್ರತಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.

ಅಭಿವೃದ್ಧಿ, ವೈಚಾರಿಕ ಬದ್ಧತೆ ಮತ್ತು ಕಾರ್ಯಕರ್ತರ ತಂಡ...ಈ ಅಂಶಗಳ ಆಧಾರದ ಮೇಲೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸುನಿಲ್ ಕುಮಾರ್ ಜಯ ಗಳಿಸಲಿದ್ದಾರೆ. ಮೊದಲಿನಿಂದಲೂ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಬಾರಿಯೂ ಗೆಲುವು ಖಚಿತ ಎಂದರು. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಗೆ ಸಮಾಧಾನ ತಂದಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಿದೆ. ಅಲ್ಪಸಂಖ್ಯಾತರನ್ನು ಸೆಳೆಯುವ ಕಾಂಗ್ರೆಸ್ ಯತ್ನ ವಿಫಲವಾಗಿದೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.