ಬಿಎಸ್‌ವೈ, ಈಶ್ವರಪ್ಪ ಸಮಾಲೋಚನೆ!

7

ಬಿಎಸ್‌ವೈ, ಈಶ್ವರಪ್ಪ ಸಮಾಲೋಚನೆ!

Published:
Updated:
ಬಿಎಸ್‌ವೈ, ಈಶ್ವರಪ್ಪ ಸಮಾಲೋಚನೆ!

ಶಿವಮೊಗ್ಗ: ಕೆಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ನಗರದ ನಿವಾಸದಲ್ಲಿ ಭಾನುವಾರ ಸಂಜೆ ಸಭೆ ನಡೆಸಿದರು.ನಗರದ ನೆಹರೂ ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ದಸರಾ ಉತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ಶಂಕರಮೂರ್ತಿ ಅವರ ನಿವಾಸಲ್ಲಿ ಸಭೆ ನಡೆಯಿತು. ಕೆಜೆಪಿ ಸ್ಥಾಪನೆಯಾದ ಬಳಿಕ ಇಬ್ಬರು ನಾಯಕರು ಒಟ್ಟಿಗೆ ಕಾಣಿಸಿಕೊಂಡರು.ಸುಮಾರು 30 ನಿಮಿಷಗಳ ಕಾಲ ನಡೆದ ಸಭೆಯಲ್ಲಿ, ಶಿವಮೊಗ್ಗ ನಗರಸಭೆಯಲ್ಲಿ ಬಿಜೆಪಿ-ಕೆಜೆಪಿ ಹೊಂದಾಣಿಕೆ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಯಡಿಯೂರಪ್ಪ ಅವರು ಬಿಜೆಪಿ ಸೇರ್ಪಡೆಗೆ ಈಶ್ವರಪ್ಪ ಈ ಹಿಂದೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರನ್ನು ಒಪ್ಪಿಸಲು ಈ ಸಭೆ ಆಯೋಜಿಸಲಾಗಿತ್ತು ಎಂದು ಮೂಲಗಳು ದೃಢಪಡಿಸಿವೆ.ಸಭೆಯಲ್ಲಿ ಡಿ.ಎಚ್.ಶಂಕರಮೂರ್ತಿ, ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಕೆಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜ್ಯೋತಿ ಪ್ರಕಾಶ್ ಉಪಸ್ಥಿತರಿದ್ದರು.ಸಭೆಯ ಬಳಿಕ ನೆಹರೂ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, `ನಾವು ಪ್ರತಿ ಹಬ್ಬಗಳಲ್ಲೂ ಒಟ್ಟಿಗೆ ಸೇರುವುದು ಸಹಜ. ಸಭೆಯಲ್ಲಿ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆಯಾಗಿಲ್ಲ. ಬಿಜೆಪಿ ಸೇರ್ಪಡೆಯ ಬಗ್ಗೆಯೂ ಯಾವುದೇ ನಿರ್ಧಾರವಾಗಿಲ್ಲ. ಮುಂದೆ ಈ ಬಗ್ಗೆ ತೀರ್ಮಾನಿಸುತ್ತೇನೆ' ಎಂದು ಹೇಳಿದರು.

ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮಾತನಾಡಿ, `ಯಡಿಯೂರಪ್ಪ ಬಿಜೆಪಿ ತೊರೆದು ಬೇರೆ ಪಕ್ಷ ಕಟ್ಟಿದ್ದಾರೆ. ರಾಜಕೀಯವಾಗಿ ನಾವು ದೂರ ಉಳಿದಿದ್ದರೂ ಪ್ರತಿಹಬ್ಬಗಳಲ್ಲಿ ಒಟ್ಟಿಗೆ ಸೇರುತ್ತೇವೆ.ಶಂಕರಮೂರ್ತಿ ವಿಧಾನ ಪರಿಷತ್ ಸಭಾಪತಿ ಆಗಿರುವ ಹಿನ್ನೆಲೆಯಲ್ಲಿ ಅವರು ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಮುಂದೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ' ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry