ಬಿಎಸ್‌ವೈ ಕಾರಣರಲ್ಲ

7

ಬಿಎಸ್‌ವೈ ಕಾರಣರಲ್ಲ

Published:
Updated:
ಬಿಎಸ್‌ವೈ ಕಾರಣರಲ್ಲ

ಬೆಳಗಾವಿ: ಈ ಭಾಗದ ಜನರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಸುವರ್ಣ ವಿಧಾನಸೌಧ ನಿರ್ಮಾಣಕ್ಕೆ ಮೂಲ ಕಾರಣಕರ್ತ ನಾನು, ಯಡಿಯೂರಪ್ಪನ ಅವರಲ್ಲ~ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಹೇಳಿದರು.ಗುರುವಾರ ಸುವರ್ಣ ವಿಧಾನಸೌಧ ಉದ್ಘಾಟನೆಗೆ ಆಗಮಿಸಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿ, `2006ರ ಸೆಪ್ಟಂಬರ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸಿದ ಸಂದರ್ಭದಲ್ಲಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

 

ಈ ನಿರ್ಣಯದಂತೆ 2007ರಲ್ಲಿ ಸುವರ್ಣಸೌಧ ಕಟ್ಟಡ ಎಂದು ಹೆಸರನ್ನಿಟ್ಟು, 70 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಅಂದಿನ ಉಪ ಮುಖ್ಯಮಂತ್ರಿ ಯಡಿಯೂರಪ್ಪ ಅಮೆರಿಕದಲ್ಲಿ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಿದ್ದರು~ ಎಂದು ಹೇಳಿದರು.ಉತ್ತರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಸುವರ್ಣ ವಿಧಾನಸೌಧ ಮಹತ್ವದ ಮೈಲುಗಲ್ಲಾಗಲಿದೆ ಎಂದ ಅವರು, `ರಾಜ್ಯದ ಸೇವೆ ಮಾಡಿದ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ  ಹಾಗೂ ನಮ್ಮನ್ನು ಉದ್ಘಾಟನಾ ಸಮಾರಂಭಕ್ಕೆ ಸರಿಯಾಗಿ ಆಹ್ವಾನಿಸುವ ಕನಿಷ್ಠ ಸೌಜನ್ಯವನ್ನೂ ಸರ್ಕಾರ ತೋರಿಸಿಲ್ಲ. ಆದರೆ ಈ ಸಂತೋಷದ ಸಂದರ್ಭದಲ್ಲಿ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ~ ಎಂದೂ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry