ಬಿಎಸ್‌ವೈ ಜಯದೇವ ಆಸ್ಪತ್ರೆಗೆ ದಾಖಲು

7

ಬಿಎಸ್‌ವೈ ಜಯದೇವ ಆಸ್ಪತ್ರೆಗೆ ದಾಖಲು

Published:
Updated:

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರ ಬೆಳಗಿನ ಜಾವ ನಗರದ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ.ಶನಿವಾರ ಸಂಜೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕವೂ ಹೆಚ್ಚಿನ ಚಿಕಿತ್ಸೆಯ ಅಗತ್ಯವನ್ನು ಮನಗಂಡು ಆಸ್ಪತ್ರೆಗೆ ದಾಖಲಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಭಾನುವಾರ ಬೆಳಿಗ್ಗೆ 1.20ರ ಸುಮಾರಿಗೆ ಜಯದೇವ ಆಸ್ಪತ್ರೆಗೆ ಕರೆತರಲಾಗಿದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry